ಹುಬ್ಬಳ್ಳಿ –
ಹುಬ್ಬಳ್ಳಿಯಲ್ಲೂ ಪಾಲಿಕೆಯಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ – ಚಿಟಗುಪ್ಪಿ ಆಸ್ಪತ್ರೆಯಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ, ಪಾಲಿಕೆಯ ಆಯುಕ್ತರಿಂದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಹೌದು
ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಗಳು ನಡೆಯುತ್ತಿವೆ.ಇನ್ನೂ ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಕೂಡಾ ಈ ಒಂದು ಕಾರ್ಯಕ್ರಮಗಳನ್ನು ಮಹಾನಗರ ಪಾಲಿಕೆಯಿಂದ ಹಮ್ಮಿಕೊಳ್ಳಲಾಗಿದ್ದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿ ಯಲ್ಲಿ ಪಾಲಿಕೆಯಿಂದ ಲಸಿಕಾ ಕೇಂದ್ರಗಳನ್ನು ಆರಂಭ ಮಾಡಲಾಗಿದೆ.
ಹೀಗಾಗಿ ನಗರದ ತುಂಬೆಲ್ಲಾ ಲಸಿಕಾ ಕೇಂದ್ರ ಗಳನ್ನು ತೆರೆಯಲಾಗಿದ್ದು ಸಾರ್ವಜನಿಕರ ಜನದಟ್ಟಣೆ ಸ್ಧಳಗಳಲ್ಲಿ ಈ ಒಂದು ಲಸಿಕೆಗಳನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಲಾಗು ತ್ತಿದೆ.ಇನ್ನೂ ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಕಾರ್ಯಕ್ರಮಕ್ಕೆ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ ಯವರು ಈ ಒಂದು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದರೊಂದಿಗೆ ಹುಬ್ಬಳ್ಳಿಯಲ್ಲೂ ಪಲ್ಸ್ ಪೋಲಿಯೋ ಕಾರ್ಯಕ್ರಮಗಳು ಕಂಡು ಬಂದವು.ನಗರದ ತುಂಬೆಲ್ಲಾ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಗಳು ಕಂಡು ಬರುತ್ತಿದ್ದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದಲೂ ಪಲ್ಸ್ ಪೋಲಿಯೋ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಪಾಲಿಕೆಯಿಂದ ಲಸಿಕಾ ಕಾರ್ಯಕ್ರಮ ನಡೆಯಿತು.ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಮಹೇಶ್ ತೆಂಗಿನಕಾಯಿ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ ಯವರಿಂದ ಚಾಲನೆ ನೀಡಿದರು.
ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕಾ ಹನಿ ಹಾಕುವ ಮೂಲಕ ಚಾಲನೆ ನೀಡಲಾ ಯಿತು.ಪಾಲಿಕೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..