ಘಟಾನುಘಟಿಯ ನಾಯಕರನ್ನು ತಿರಸ್ಕಾರ ಮಾಡಿದ ಪಂಜಾಬ್ ಮತದಾರರು – ಈ ಬಾರಿಯ ಚುನಾವಣೆಯಲ್ಲಿ ಸೋತ ನಾಯಕರು ಯಾರು ಯಾರು ಗೊತ್ತಾ…..

Suddi Sante Desk

ಬೆಂಗಳೂರು –

ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರುಗಳನ್ನು ಪಂಜಾಬ್ ಮತದಾರರು ತಿರಸ್ಕರಿಸಿದ್ದಾರೆ.ಹೌದು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿಸಲಾ ಗಿದ್ದ ಚರಣ್ ಸಿಂಗ್ ಚನ್ನಿ ಅವರು ಚಮ್ಕಾರ್ ಸಾಹೀಬ್ ಹಾಗೂ ಬಾದೂರು ಕ್ಷೇತ್ರಗಳಿಂದ ಸ್ರ್ಪಧಿಸಿದ್ದರು. ಎರಡು ಕ್ಷೇತ್ರಗಳಲ್ಲೂ ಹೀನಾಯ ಸೋಲು ಕಂಡಿದ್ದಾರೆ.ಅದೇ ರೀತಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರ ದಿಂದ ಸ್ರ್ಪಧಿಸಿದ್ದರು ಅವರಿಗೂ ಮತದಾರರು ಮನೆಬಾ ಗಿಲು ದಾರಿ ತೋರಿಸಿದ್ದಾರೆ.ಇನ್ನೂ ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿಧು ಅವರೊಂ ದಿಗಿನ ಭಿನ್ನಾಭಿಪ್ರಾಯದಿಂದ ಮುಖ್ಯಮಂತ್ರಿ ಗಾದಿಯಿಂದ ಕೆಳಗಿಳಿದ ನಂತರ ಹೊಸ ಪಕ್ಷ ಸ್ಥಾಪನೆ ಮಾಡಿ ಬಿಜೆಪಿ ಮೈತ್ರಿಯೊಂದಿಗೆ ಪಾಟಿಯಾಲಾ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸಿದ್ದ ಅಮರೇಂದರ್‍ ಸಿಂಗ್ ಅವರಿಗೆ ಮಣ್ಣು ಮುಕ್ಕಿಸುವಲ್ಲಿ ಆಮ್ ಆದ್ಮಿ ಅಭ್ಯರ್ಥಿ ಯಶಸ್ವಿಯಾಗಿ ದ್ದಾರೆ.

ಅದೇ ರೀತಿ ತಮ್ಮ ಸಾಮಾಜಿಕ ಕಳಕಳಿಯಿಂದ ಇಡೀ ದೇಶದ ಗಮನ ಸೆಳೆದಿದ್ದ ಬಾಲಿವುಡ್ ನಟ ಸೋನುಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾ ಬ್‌ನ ಮೋಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರಿಗೂ ಸೋಲಿನ ರುಚಿಯಾಗಿದೆ.ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರ ಮಾದರಿಯಲ್ಲೇ ಶಿರೋಮಣಿ ಅಕಾಲಿದಳದ ಪ್ರಕಾಶ್ ಸಿಂಗ್ ಬಾದಲ್,ಮಜಿತಿಯಾ ಹಾಗೂ ಮನ್ಪ್ರೀ ತ್ರಂಮತಹ ನಾಯಕರಿಗೂ ಅಲ್ಲಿನ ಮತದಾರರು ಸೋಲಿನ ರುಚಿ ಉಣಿಸಿದ್ದಾರೆ.ಇದೇ ಮೊದಲ ಬಾರಿಗೆ ಪಂಜಾಬ್ನಪ ಎಲ್ಲ ಕ್ಷೇತ್ರಗಳಿಗೂ ಸ್ಪರ್ಧಿ ಸಿದ್ದ ಆಮ್ ಆದ್ಮಿ ಇತರ ಉಳಿದ ಎಲ್ಲ ಪಕ್ಷಗಳಿಗೂ ಮಣ್ಣು ಮುಕ್ಕಿಸಿದ್ದು ಭಾರೀ ಅಂತರದ ವಿಜಯ ಸಾಧಿಸುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.ಮತ್ತೆ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದ ಸಿಧು ಅವರಿಗೆ ಭ್ರಮನಿರಸ ನವಾಗಿದ್ದು ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದು, ಇದೇ ಮೊದಲ ಬಾರಿಗೆ ಪಂಜಾಬ್ನಧಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡರಿಗೆ ಶುಭಾಶಯಗಳ ಸುರಿಮಳೆ ಹರಿದು ಬರುತ್ತಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.