ಶಿರಗುಪ್ಪ –
ಶಿಕ್ಷಕರ ಸಮಸ್ಯೆ ಗಳ ಕುರಿತು ಶಿಕ್ಷಕರು ಧ್ವನಿ ಎತ್ತಿದ್ದಾರೆ ಹೌದು ಪ್ರೌಢ ಶಾಲಾ ಶಿಕ್ಷಕರು ಎದುರಿ ಸುತ್ತಿರುವ ಸಮಸ್ಯೆ ಮತ್ತು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ತಾಲ್ಲೂಕು ಘಟಕ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗುರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಈ ಒಂದು ಕಾರ್ಯ ನಡೆಯಿತು
ಶಿಕ್ಷಕರು ಇಲಾಖೆಯ ಜೊತೆಗೂಡಿ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ವಿವಿಧ ರೀತಿಯ ಚಟು ವಟಿಕೆಗಳನ್ನು ಕೈಗೊಂಡು,ಫಲಿತಾಂಶ ಉತ್ತಮ ಪಡಿಸಲು ಪ್ರಯತ್ನಿಸುತ್ತಿದ್ದೇವೆ.ಗುಣಾತ್ಮಕ ಶಿಕ್ಷಣ ನೀಡಲು ರಾಜ್ಯ ಮತ್ತು ಜಿಲ್ಲಾ ಹಂತದ ಅಧಿಕಾರಿ ಗಳು ಪ್ರತ್ಯೇಕ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗಿದೆ’ ಎಂದರು.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ 3 ಹಂತದ ಪರೀಕ್ಷೆಗಳ ಬದಲು ಈ ಹಿಂದಿನಂತೆ 2 ಪರೀಕ್ಷೆಗಳನ್ನು ಆಯೋಜಿಸುವುದು, ಪ್ರಶ್ನೆ ಪತ್ರಿಕೆಯ ವಿನ್ಯಾಸವನ್ನು ಸರಳೀಕರಣ ಗೊಳಿ ಸುವುದು ಹಾಗೂ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯವನ್ನು ಏ.14ರ ಒಳಗೆ ಪೂರ್ಣಗೊಳಿಸ ಬೇಕು.
ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಕೆಕೆಆರ್‌ಡಿ ಮಂಡಳಿಯಿಂದ ನಡೆಯುವ ಪ್ರೌಢ ಶಾಲೆಗಳ ಸಿಬ್ಬಂದಿಗೆ ನಿಗದಿತ ಸಮಯದಲ್ಲಿ ವೇತನ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ್ದರು.
ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಯೋಗಿಶ್ ಜಿ, ರಾಜ್ಯ ಪರಿಷತ್ ಸದಸ್ಯ ಧರ್ಮಣ್ಣ ಕೆ, ಖಜಾಂಚಿ ಮಲ್ಲನಗೌಡ, ಸಹ ಕಾರ್ಯದರ್ಶಿ ಭೋಜರಾಜ, ಪ್ರೌಢ ಶಾಲಾ ಶಿಕ್ಷಕರು ಸೇರಿದಂತೆ ಹಲವರು ಈ ಒಂದು ಸಂದರ್ಬದಲ್ಲಿ ಇದ್ದರು.
ಸುದ್ದಿ ಸಂತೆ ನ್ಯೂಸ್ ಶಿರಗುಪ್ಪ…..