ಬೆಂಗಳೂರು –
ರಮೇಶ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಬೆನ್ನಲ್ಲೇ ಇತ್ತ ಬಳ್ಳಾರಿಯಲ್ಲಿ ನನ್ನ ಬಳಿ ಕೂಡಾ ಕೆಲವರ ಸಿಡಿ ಇವೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಹೌದು ಬಳ್ಳಾರಿ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಗೆ ಬೆಂಗಳೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈತ ನನ್ನ ಬಳಿ 19 ಸೆಕ್ಸ್ ಸಿಡಿಗಳಿವೆ ಎಂದಿದ್ದ ರಾಜಶೇಖರ್ ಮುಲಾಲಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈ ಒಂದು ಪ್ರಕರಣದ ವಿಚಾರಣೆಗೆ ಸೋಮವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ರಾಜಶೇಖರ್ ಮುಲಾಲಿಗೆ ನೋಟಿಸ್ ನೀಡಿದ್ದಾರೆ. ಮುಲಾಲಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮಂಡ್ಯದ ಮಾನವ ಹಕ್ಕು ಸೇವಾ ಸಮಿತಿ ಅಧ್ಯಕ್ಷೆ ಇಂದಿರಾ ದೂರು ನೀಡಿದ್ದರು.ಈ ರೀತಿಯಾಗಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದು, ಸಿಡಿಯಲ್ಲಿರುವ ಲೇಡಿಗಾಗಿ ಬೆಂಗಳೂರಿನ ಎಲ್ಲಾ ಪಿಜಿಯನ್ನು ಪೊಲೀಸರು ಜಾಲಾಡಿದ್ದಾರೆ