ನವದೆಹಲಿ –
ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ.ಕೇಂದ್ರ ಮುಖ್ಯ ಚುನಾ ವಣಾ ಆಯುಕ್ತರಾಗಿ ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈಗಿನ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ 14ರಂದು ಹುದ್ದೆಯಿಂದ ನಿರ್ಗಮಿಸಲಿದ್ದಾರೆ.ಕಾನೂನು ಸಚಿವಾಲಯವು ಹೊರಡಿಸಿದ ಮೇ 12ರ ಅಧಿಸೂಚ ನೆಯ ಪ್ರಕಾರ ಸಂವಿಧಾನದ 324ನೇ ವಿಧಿಯ ಷರತ್ತು (2) ರ ಅನುಸಾರವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನೇಮಕಾತಿಯನ್ನು ಮಾಡಿದ್ದಾರೆ.ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ಇಂದು ಟ್ವಿಟರ್ ಪೋಸ್ಟ್‌ನಲ್ಲಿ ಈ ಘೋಷಣೆ ಮಾಡಿದ್ದಾರೆ.