ಬೆಂಗಳೂರು –
ಕಳೆದ ಏಳು ತಿಂಗಳ ಹಿಂದೆ ನಡೆದ ಚುನಾವಣೆ ಯಲ್ಲಿ ಯುವ ಕಾಂಗ್ರೆಸ್ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ರಕ್ಷಾ ರಾಮಯ್ಯ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.ಚೌಡಯ್ಯ ಮೆಮೋರಿ ಯಲ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರವನ್ನು ವಹಿಸಿಕೊಂಡರು.
ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್,ಯುವ ಕಾಂಗ್ರೆಸ್ ಉಸ್ತುವಾರಿ ನಾಯಕ ಕೃಷ್ಣ ಅಲಾವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಮೊಹಮ್ಮದ್, ಧ್ರುವನಾರಾಯಣ್,ಮಾಜಿ ಸಚಿವರಾದ ಎಂ.ಆರ್ ಸೀತಾರಾಮ್, ಆಂಜನೇಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಅನೇಕರ ಸಮ್ಮುಖದಲ್ಲಿ ರಕ್ಷಾ ರಾಮಯ್ಯ ಅವರು ಅಧಿಕಾರ ಸ್ವೀಕರಿಸಿದರು.