ಬೆಳಗಾವಿ –
ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗೋಕಾಕ್ ತಾಲೂಕು ಆಸ್ಪತ್ರೆಯಿಂದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.ಏಪ್ರಿಲ್ 4 ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಏಪ್ರಿಲ್ 1ರಂದು ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು ಮಾಜಿ ಸಚಿವ ರಮೇಶ್ ಜಾರಕಿಹೊಳಿ. ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾ ಧಿಕಾರಿ ಡಾ.ರವೀಂದ್ರ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಕ್ವಾರೆಂ ಟೈನ್ ಆಗಲಿದ್ದಾರಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು.
ಇನ್ನೂ ಮುಖ್ಯವಾಗಿ ಮತ್ತೊಮ್ಮೆ ಕರೊನಾ ಟೆಸ್ಟ್ ಮಾಡಿಸಿದ ಮೇಲೆ ವರದಿ ಬಂದ ಮೇಲೆ ಆಸ್ಪತ್ರೆ ಯಿಂದ ಇವರು ಡಿಸ್ಟಾರ್ಜ್ ಆಗಬೇಕು ಆದರೆ ವರದಿ ಬರುವ ಮುಂಚೆಯೇ ಆಸ್ಪತ್ರೆಯಿಂದ ಇವರು ಮನಗೆ ತೆರಳಿದರು