ಬೆಂಗಳೂರು
ರಾಜ್ಯದಲ್ಲಿ ಕ್ರೀಡೆಗೆ ಮೂಲಸೌಲಭ್ಯಗಳನ್ನ ಒದಗಿಸಲು ಖೇಲೋ ಇಂಡಿಯಾ ಯೋಜನೆಯಡಿ ಒಟ್ಟು 160 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ರಾಜ್ಯಕ್ಕೆ ಆಗಮಿಸಿದ ಕೇಂದ್ರ ಕ್ರೀಡಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರು ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ವಿವರಿಸಿ, ಶೀಘ್ರವೇ ಅನುಮೋದನೆ ನೀಡಲು ಮನವಿ ಮಾಡಿದ್ರು.

ಅಲ್ಲದೆ `ಫಿಟ್ ಇಂಡಿಯಾ ಅಭಿಯಾನ’ದ ಅಡಿಯಲ್ಲಿ ಹೊರಾಂಗಣ ಜಿಮ್ ಸೌಲಭ್ಯ ಒದಗಿಸಲು 310 ಕೋಟಿ ರೂ. ಅಗತ್ಯವಿದ್ದು ಕೇಂದ್ರ ಸರ್ಕಾರದ ಆರ್ಥಿಕ ನೆರವಿಗೆ ಮನವಿ ಮಾಡಿದರು. ಅನುದಾನದ ಬಿಡುಗಡೆ ನಂತರ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಗಳಲ್ಲಿ ಓಪನ್ ಜಿಮ್ ತೆಗೆಯಲಾಗುವುದು ಎಂದರು.