ಧಾರವಾಡ –
ಧಾರವಾಡದ ವಾರ್ಡ್ 3 ರಲ್ಲಿ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಾಗಿದ್ದ ಮಂಜುನಾಥ ನಡಟ್ಟಿ ಈಬಾರಿ ಟಿಕೆಟ್ ನಿರೀಕ್ಷೆಯಲ್ಲಿದ್ದರು.ಸಧ್ಯ ಈ ಒಂದು ವಾರ್ಡ್ ನಲ್ಲಿ ಈರೇಶ ಅಂಚಟಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ. ಈಗಾಗಲೇ ಅವರು ಕೂಡಾ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಅತ್ತ ಟಿಕೆಟ್ ತಪ್ಪುತ್ತಿದ್ದಂತೆ ಇತ್ತ ಬಂಡಾಯ ಎದ್ದಿದ್ದಾರೆ
ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಇಂದು ನಾಮಪತ್ರ ಸಲ್ಲಿಸಲು ಮುಂದಾಗಿ ದ್ದಾರೆ.ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲು ನಿರ್ಧಾರ ತೆಗೆದುಕೊಂಡಿದ್ದು ಮುಂದೇನು ಆಗುತ್ತದೆ ಎಂಬುದನ್ನು ಕಾದು ನೋಡಬೇಕು