ಹುಬ್ಬಳ್ಳಿ –
ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆ ಯಶಸ್ವಿ ಆಯೋಜನೆಗಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರಮಾಣ ಪತ್ರ ಪ್ರದಾನ ಸಂವಿಧಾನ ರಕ್ಷಣೆಗೆ ಎಲ್ಲರೂ ಮುಂದಾಗಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಕರೆ
ಕಳೆದ ಒಂದು ತಿಂಗಳಿನಿಂದ ಸಂವಿಧಾನ ಜಾಗೃತಿ ಜಾಥಾವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ವಿಚಾರಗಳನ್ನು ಜನರಿಗೆ ತಲುಪಿಸುವ ಉದ್ದೇಶ ದಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು ಸರ್ಕಾರಕ್ಕೆ ಒಳ್ಳೆಯ ಕೀರ್ತಿ ತರುವ ಕಾರ್ಯಕ್ರಮ ಇದಾಗಿದೆ.
ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಎರಡು ದಾಖಲೆಗಳು ಸೇರ್ಪಡೆ ಆಗಿವೆ.ಸಂವಿಧಾನ ರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾದ ಸಂತೋಷ ಲಾಡ್ ಹೇಳಿದರು.
ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಎರಡು ವಿಶೇಷ ಕಾರ್ಯಕ್ರ ಮಗಳಾದ ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆ ಯಶಸ್ವಿ ಆಯೋಜ ನೆಗಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಾ ಶಾಸಕರು ಪಕ್ಷಾತೀತವಾಗಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಯುವಲ್ಲಿ ಸಹಕರಿಸಿದ್ದಾರೆ. ಜಾಥಾದಲ್ಲಿ ಭಾಗವಹಿಸಿದ್ದ ಇಲಾಖೆಗಳ ಅಧಿ ಕಾರಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಗ್ಯಾರಂಟಿ ಯೋಜನೆಗಳ ಮುಖಾಂತರ ರೂ.58 ಸಾವಿರ ಕೋಟಿ ರೂಪಾಯಿ ಹಣವನ್ನು ಬಡವರ ಮನೆಗೆ ತಲುಪುವಂತೆ ಮಾಡಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣವಾ ಗುತ್ತಿದೆ. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆದಿದೆ.
ದೇಶದಲ್ಲಿ ಹುಬ್ಬಳ್ಳಿ ಧಾರವಾಡ ಮಿಂಚುತ್ತಿದೆ. ಜಿಲ್ಲೆಯಲ್ಲಿ ಹಲವು ದಾಖಲೆಗಳು ದಾಖಲಾಗು ತ್ತಿವೆ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ.ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್.ಸಿ.ಮಹಾದೇವಪ್ಪ ಅವರು ಧಾರವಾಡ ಜಿಲ್ಲೆಯಲ್ಲಿ ಆಯೋಜನೆ ಮಾಡುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ಇತರ ಜಿಲ್ಲೆಗಳ ಅಧಿಕಾರಿಗಳಿಗೆ ತಿಳಿಸಿರುವುದು ಸಂತಸವನ್ನುಂಟು ಮಾಡಿದೆ.
10 ಸಾವಿರ ಜನರು ಪಾರಂಪಾರಿಕ ನಡಿಗೆ ಹಾಗೂ 15 ಸಾವಿರ ಜನರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಂವಿಧಾನ ದಿಂದ ನಮ್ಮ ರಕ್ಷಣೆಯಾಗುತ್ತಿದೆ. ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ರಾಜಕೀ ಯ ನ್ಯಾಯ, ಸಮಾನತೆ, ಶಿಕ್ಷಣ, ಸಂಪತ್ತನ್ನು ಅನುಭವಿಸುವ ಹಕ್ಕುಗಳು ದೊರೆಯುತ್ತಿವೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಸವಿನೆನಪಿಗಾಗಿ ಜಗತ್ತಿನೆಲ್ಲೆಡೆ ವಿಶ್ವ ಜ್ಞಾನ ದಿನವ ನ್ನಾಗಿ ಆಚರಣೆ ಮಾಡಲಾಗುತ್ತದೆ.
ಅಂಬೇಡ್ಕರ್ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬಾರದು. ಸಂವಿಧಾನ ನಮಗೆ ಯಾವ ಹಕ್ಕುಗಳು, ಅಧಿಕಾರಗಳನ್ನು ನೀಡಿದೆ ಎಂಬುದನ್ನು ತಿಳಿಯಪಡಿಸುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೆರಿಗೆ ರಜೆ, ಮಹಿಳೆಯರಿಗೆ ಶಿಕ್ಷಣ ಸೇರಿದಂತೆ ಹಲವಾ ರು ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರ್ಯಗಳನ್ನು ಎಲ್ಲರೂ ನೆನೆಯಬೇ ಕಾಗಿದೆ
ದೇಶದ ಎಲ್ಲ ವರ್ಗದವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಸಂವಿಧಾನ ಸಂರಕ್ಷಣೆ ಮಾಡು ವುದು ನಮ್ಮೆಲ್ಲರ ಕರ್ತವ್ಯ ಎಂದರು.ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜನವರಿ 26 ರಿಂದ ಪ್ರಾರಂಭಗೊಂಡಿತು.146 ಗ್ರಾಮಗಳು ಹಾಗೂ ಎಲ್ಲಾ ವಾರ್ಡಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡಿದಿದೆ.
ಸಚಿವರು ಅರ್ಥಪೂರ್ಣ ಕಾರ್ಯಕ್ರಮ ಇದಾಗ ಬೇಕು ಎಂದು ನಿರ್ದೇಶನ ನೀಡಿದ್ದರು. ಅದರಂತೆ ಯಶಸ್ವಿಯಾಗಿ ಕಾರ್ಯಕ್ರಮ ನಡೆದಿರುತ್ತದೆ. ಸಂವಿಧಾನ ಜಾಗೃತಿ ಜಾಥಾ ಸ್ಪರ್ಧೆಯಲ್ಲಿ ಜಿಲ್ಲೆಯು ಮೊದಲ 10 ದಿನಗಳಲ್ಲಿ ಮೊದಲನೇ ಸ್ಥಾನದಲ್ಲಿತ್ತು. ನಂತರ 3ನೇ ಸ್ಥಾನಕ್ಕೆ ಇಳಿಕೆ ಕಂಡಿತು
ಹಲವಾರು ವಿಶೇಷ ಕಾರ್ಯಕ್ರಮಗಳ ಆಯೋಜನೆ ನಂತರ ಪುನಃ ಮೊದಲ ಸ್ಥಾನ ಗಳಿಸಿತು. ಎಲ್ಲಾ ಶಾಲೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಥಾ ಕಾರ್ಯ ಕ್ರಮವನ್ನು ಉತ್ಸುಕತೆಯಿಂದ ಆಯೋಜನೆ ಮಾಡಿ, ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಸಂದಿವೆ. ಇಡೀ ರಾಜ್ಯದಲ್ಲಿ ಜಾಥಾ ಕಾರ್ಯಕ್ರಮ ಹೆಸರಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ದೆಹಲಿಯ ಇಂಡಿಯಾ ಬುಕ್ಕ್ ಆಫ್ ರೆಕಾರ್ಡ ಸಂಸ್ಥೆಯ ತೀರ್ಪುಗಾರ ನರವಿಜಯ ಮಾತನಾಡಿ ಅತಿ ಹೆಚ್ಚು ಜನರು ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದ ರಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಲವಾರು ದಾಖಲೆ ಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುಸ್ತಕ ದಲ್ಲಿ ದಾಖಲಾಗಿವೆ.
ದೇಶದಲ್ಲಿ ಯಾವುದೇ ವಿಶೇಷ ಸಾಧನೆ, ದಾಖಲೆ ಗಳು ಇಲ್ಲದಿರುವುದನ್ನು ಗಣನೆಗೆ ತೆಗೆದುಕೊಂಡು ವಿಶೇಷ ದಾಖಲೆ ಮಾಡಿದವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರಮಾಣ ಪತ್ರಗಳ ನ್ನು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಧಾರವಾಡ ಜಿಲ್ಲೆ ಹೆಸರು ಮಾಡಲಿ ಎಂದು ಹಾರೈಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಸಿ. ಬೇವೂರ ಅವರು ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ದೆಹಲಿಯ ಇಂಡಿಯಾ ಬುಕ್ಕ್ ಆಫ್ ರೆಕಾರ್ಡ ಸಂಸ್ಥೆಯ ತೀರ್ಪುಗಾರ ನರವಿಜಯ ಅವರಿಂದ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಎರಡು ವಿಶೇಷ ಕಾರ್ಯ ಕ್ರಮಗಳಾದ ಪಾರಂಪರಿಕ ನಡಿಗೆ ಹಾಗೂ ಪಂಜಿನ ಮೆರವಣಿಗೆಯನ್ನು ಯಶಸ್ವಿ ಆಯೋಜನೆ ಮಾಡಿದ್ದಕ್ಕೆ ಇಂಡಿಯನ್ ಬುಕ್ ಆಫ್ ರೆಕಾರ್ಡ ಪ್ರಶಸ್ತಿ ಪ್ರಮಾಣಪತ್ರವನ್ನು ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ಸನ್ಮಾನ ಮಾಡ ಲಾಯಿತು.ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಸ್ವರೂಪ ಟಿ.ಕೆ., ಪಾಲಿಕೆಯ ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲಾ, ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಅಲ್ಲಾಭಕ್ಷ್,
ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಪೌರ ಕಾರ್ಮಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..