ಬೆಳಗಾವಿ –
ರಾಜ್ಯದಲ್ಲಿ 2.53 ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಶೀಘ್ರದಲ್ಲೇ ಅವುಗಳನ್ನು ತುಂಬೊದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿ ದರು.ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾ ಲದ ಅಧಿವೇಶನದಲ್ಲಿ ಈ ಒಂದುಮಾಹಿತಿಯನ್ನು ನೀಡಿದರು.ಎರಡು ಲಕ್ಷ 53 ಸಾವಿರ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಈ ವರ್ಷದಲ್ಲಿ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.ಈ ಕುರಿತಂತೆ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿ ಯಲ್ಲಿ ಜೆಡಿಎಸ್ ಸದಸ್ಯ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ ರಾಜ್ಯ ದಲ್ಲಿ ಒಟ್ಟು 7.60 ಲಕ್ಷ ಹುದ್ದೆ ಮಂಜೂರಾಗಿದೆ ಈ ಪೈಕಿ 5.11 ಲಕ್ಷ ಹುದ್ದೆ ಭರ್ತಿ ಮಾಡಲಾಗಿದೆ.
ಇದರಲ್ಲಿ ಇನ್ನೂ 2.53 ಲಕ್ಷ ಹುದ್ದೆಗಳು ಖಾಲಿ ಇವೆ ಎಂದರು.ಇನ್ನೂ ಸಿ ಮತ್ತು ಡಿ ಗ್ರೂಪ್ ಹುದ್ದೆಗಳನ್ನ ಗುತ್ತಿಗೆ ಆಧಾರದಲ್ಲಿ ತುಂಬಲು ಸೂಚನೆಯನ್ನು ಈಗಾಗಲೇ ನೀಡಲಾಗಿದೆ ಎಂದರು.ಸರ್ಕಾರಿ ಕೆಲಸಕ್ಕೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎ ಮತ್ತು ಬಿ ಗ್ರೂಪ್ ಹುದ್ದೆಗಳನ್ನು ಇನ್ಚಾರ್ಜ್ ನೀಡಲಾಗಿದೆ.
ಈ ವರ್ಷ 1 ಲಕ್ಷ ಸರ್ಕಾರಿ ಹುದ್ದೆ ತುಂಬಲು ಒಪ್ಪಿಗೆ ನೀಡಿದ್ದೇನೆ ಆದ್ಯತೆಯ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮಾಡುತ್ತೇವೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..