ಬೆಂಗಳೂರು –
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯ ದೊಳಗೆ ನೀಡುವ ಗುರಿ ಇದೆ.ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡುವ ಗುರಿ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು ಇಲಾಖೆಯಲ್ಲಿ ಸುಧಾರಣೆ, ಬದಲಾ ವಣೆ,ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ರಾದ ಬಿ.ಸಿ.ನಾಗೇಶ್ ತಿಳಿಸಿದರು.
ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ‘ಒಂದು ವರ್ಷ’ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ.
ಇನ್ನೂ ಹೊಸದಾಗಿ 15 ಸಾವಿರ ಶಿಕ್ಷಕರು ಸರ್ಕಾರಿ ಶಾಲೆ ಗಳಿಗೆ ಬರಲಿದ್ದು ಇವರು ಬಂದ ನಂತರ ಈಗಾಗಲೇ ಹಲವಾರು ವರ್ಷಗಳಿಂದ ಒಂದೇ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಇಲಾಖೆ ಹುದ್ದೆ ಖಾಲಿ ಇಲ್ಲ ಎಂದು ಹೇಳುವ ಮುನ್ನವೇ ಶಿಕ್ಷಕ ಬಂಧುಗಳೇ ದಯಮಾಡಿ ಎಚ್ಚೇತ್ತುಕೊಳ್ಳಿ…..