ಬೆಂಗಳೂರು –
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶಿಕ್ಷಕರ ನೇಮಕ ಹೌದು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.ರಾಜ್ಯದ 1500 ಶಾಲೆಗಳ ನ್ನು ಮಾದರಿ ಶಾಲೆಗಳನ್ನಾಗಿಸುವ ಗುರಿ ಹೊಂದಲಾಗಿದ್ದು ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಕೆಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈಗಿರುವ ಶಾಲೆಗಳಲ್ಲೇ ಮಾದರಿ ಶಾಲೆಗಳನ್ನು ಆರಂಭಿಸಲಾಗುತ್ತದೆ.ಅಲ್ಲದೆ ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುತ್ತದೆ ಎಂದರು.
ಮಲೆನಾಡಿನ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು ಕೆಲವೊಂದು ತರಗತಿಗಳಲ್ಲಿ 12 ರಿಂದ 13 ಮಕ್ಕಳು ಮಾತ್ರ ಕಲಿಯುತ್ತಿದ್ದಾರೆ.ಆದರೂ ಕೂಡ ಯಾವುದೇ ಕಾರಣಕ್ಕೂ ಶಾಲೆ ಮುಚ್ಚುವುದಿಲ್ಲ ಎಂದು ತಿಳಿಸಿದರು.