ಬೆಂಗಳೂರು –
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಅ.21 ರಂದು ಕೌನ್ಸೆಲಿಂಗ್ ಹೌದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ)ನೇಮಕಾತಿ-2022”ರ ನೇಮಕಾತಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ರಿಟ್ ಪಿಟಿಷನ್ ಅಕ್ಟೋಬರ್ 12, 2023 ರ ವಿಭಾಗೀಯ ಪೀಠದ ತೀರ್ಪಿನಂತೆ ಇದೇ ಮಾರ್ಚ್ 08 2023 ರಂದು ಪ್ರಕಟಿತ 1:1 ರ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸ ಲಿಂಗ್ ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್, 19 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು, ಜೀವಶಾಸ್ತ್ರ ಹಾಗೂ ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್ ಪ್ರಕ್ರಿಯೆಯು ಅಕ್ಟೋಬರ್, 21 ರಂದು ಬೆಳಗ್ಗೆ 10 ಗಂಟೆ ಯಿಂದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..