ಮಂಡ್ಯ –
ಯುವತಿ ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಪೋಷಕರು ಯುವಕನ ಸಾವಿನ ಬಗ್ಗೆ ಬೇರೆಯದೇ ರೀತಿಯಲ್ಲಿ ದೂರು ನೀಡಿದ್ದಾರೆ.

ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯ ಭಾಸ್ಕರ್ (22) ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆಕೆ ಪ್ರೀತಿ ಕೋರಿಕೆಯನ್ನು ನಿರಾಕರಿಸಿದ್ದರಿಂದ ಆತ್ಮಹತ್ಯೆ ಮಾಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಮ್ಮ ಪುತ್ರ ಭಾಸ್ಕರ್ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಈತನಿಗೆ ಕಳೆದ ಹಲವು ವರ್ಷಗಳಿಂದ ಹೊಟ್ಟೆ ನೋವು ಕಾಣಿಸಿಕೊಳ್ಳು ತ್ತಿದ್ದು, ಇದರಿಂದ ಬೇಸತ್ತು ಹಾಗೂ ಹೊಟ್ಟೆನೋವು ತಾಳಲಾರದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಂದೆ ಅಂದಾನಿ ಗೌಡ ದೂರು ನೀಡಿದ್ದಾರೆ.ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.