ನವದೆಹಲಿ –
BJP ಯ 111 ಅಭ್ಯರ್ಥಿ ಗಳ ಮತ್ತೊಂದು ಪಟ್ಟಿ ಬಿಡುಗಡೆ – ಬೆಳಗಾವಿ ಜಗದೀಶ್ ಶೆಟ್ಟರ್ ಸೇರಿ ದಂತೆ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಹೈ ಕಮಾಂಡ್
ಲೋಕಸಭಾ ಚುನಾವಣೆಯ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ.ಹೌದು 111 ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಈ ಒಂದು ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿಯಲ್ಲಿ ರಾಜ್ಯ ಸೇರಿದಂತೆ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಬಿಡುಗಡೆ ಮಾಡಲಾಗಿದೆ.
ಇನ್ನೂ ರಾಜ್ಯದ 5 ಕ್ಷೇತ್ರಗಳಿಗೂ ಕೂಡಾ ಟಿಕೆಟ್ ಘೋಷಣೆ ಮಾಡಲಾಗಿದ್ದು ಅನಂತ್ ಕುಮಾರ್ ಹೆಗಡೆ ಗೆ ಟಿಕೆಟ್ ಕೈತಪ್ಪಿದ್ದು ಬೆಳಗಾವಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ.2024 ರ ಲೋಕಸಭಾ ಚುನಾವ ಣೆಗೆ ಭಾರತೀಯ ಜನತಾ ಪಕ್ಷ ತನ್ನ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಈ ಬಾರಿ ಉತ್ತರ ಕನ್ನಡ ಜಿಲ್ಲೆಯಿಂದ ಅನಂತ್ ಕುಮಾರ್ ಹೆಗಡೆ ಬದಲಾಗಿ ವಿಶ್ವೇಶ್ವರ ಹೆಗೆಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿ ಯಿಂದ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಕೆ ಸುಧಾಕರನ್, ರಾಯಚೂರು ಲೋಕಸಭಾ ಕ್ಷೇತ್ರ- ರಾಜಾ ಅಮರೇಶ್ವರ ನಾಯಕ ಹೀಗೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ……