This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ಗಾಂಧಿ ಜಮಂತಿಗೆ ಮಾರ್ಗಸೂಚಿ ಬಿಡುಗಡೆ – ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಂದ ಮಾರ್ಗಸೂಚಿ ಬಿಡುಗಡೆ…..

ಗಾಂಧಿ ಜಮಂತಿಗೆ ಮಾರ್ಗಸೂಚಿ ಬಿಡುಗಡೆ – ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಂದ ಮಾರ್ಗಸೂಚಿ ಬಿಡುಗಡೆ…..
WhatsApp Group Join Now
Telegram Group Join Now

ಬೆಂಗಳೂರು –

ಈಗಾಗಲೇ ಅಕ್ಟೋಬರ್ 2ರಂದು ನಡೆಯುವ ಗಾಂಧಿ ಜಯಂತಿ ಆಚರಣೆಗೆ ತಯಾರಿ ನಡೆದಿದೆ ಈ ನಡುವೆ ಈ ಒಂದು ದಿನಾಚರಣೆ ಯನ್ನು ಶಾಲೆ ಗಳಲ್ಲಿ ಹೇಗೆ ಆಚರಣೆ ಮಾಡಬೇಕು ಎಂಬ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದ್ದಾರೆ ಹೌದು

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದೆ ,ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಈ ಒಂದು ಕುರಿತು ಸುತ್ತೋಲೆಯನ್ನು ಹೊರಡಿಸಿ ದ್ದಾರೆ.  ಪ್ರಮುಖ ಜಯಂತಿಗಳನ್ನು ಆಯಾ ದಿನದಂದು ಕಡ್ಡಾಯವಾಗಿ, ಗೌರವಪೂರ್ವ ಕವಾಗಿ ಆಚರಿಸಲು ಕ್ರಮವಹಿಸುವಂತೆ ಸಂಬಂಧಿ ಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ

ಮಹಾತ್ಮ ಗಾಂಧಿ ಜಯಂತಿಯ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿ ಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ವಹಿಸಬೇಕಾದ ಕ್ರಮಗಳ ಕುರಿತು ಸಂಬಂಧಿಸಿದ ಇಲಾಖಾ ಧಿಕಾರಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಯವರ 155ನೇ ಜಯಂತಿಯನ್ನು ಹಾಗೂ ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದು

ಈ ಐತಿಹಾಸಿಕ ಘಟನೆಯ ಶತಮಾನೋತ್ಸವ ಸಂಭ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅರ್ಥಪೂರ್ಣವಾಗಿ, ಸಂಭ್ರಮಯುತವಾಗಿ ಮತ್ತು ವೈಶಿಷ್ಟ್ಯಪೂರ್ಣ ವಾಗಿ ಕಡ್ಡಾಯವಾಗಿ ಆಚರಿಸಲು ಅಗತ್ಯ ಕ್ರಮ ಗಳನ್ನು ವಹಿಸಬೇಕು ಇಲಾಖಾಧಿಕಾರಿಗಳಿಗೆ ಹಾಗೂ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯಸ್ಮರಿಗೆ ಸೂಚಿಸಲಾಗಿದೆ

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿನಾಂಕ 02.10.2024ರಂದು ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿಗಳ, ಶಿಕ್ಷಕರ ಮತ್ತು ಎಸ್.ಡಿ.ಎಂ.ಸಿಗಳ ಸಮ್ಮುಖದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಗೌರವ ಪೂರ್ವಕವಾಗಿ ಪುಷ್ಪನಮನ ಸಲ್ಲಿಸುವುದು.

ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಗೌರವಾರ್ಥ ಬಿಳಿ ಗಾಂಧಿ ಟೋಪಿಯನ್ನು ಸ್ವಯಂ ಪ್ರೇರಿತರಾಗಿ ಧರಿಸಬಹುದಾಗಿರುತ್ತದೆ.ಈ ದಿನ ದಂದು ಆಯಾ ಶಾಲೆಗಳಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧಿಯವರ ಹಾಗೂ ಇತರೆ ಮಹಾನ್ ನಾಯಕರ ಜೀವನ ಮತ್ತು ಸಾಧನೆ,ಅವಿಸ್ಮರಣೀಯ ಕೊಡುಗೆಗಳ ಕುರಿತು, ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಘಟನೆಗಳ ಕುರಿತು ಸ್ಮರಿಸುವುದು

ಹಾಗೂ ದೇಶಪ್ರೇಮ, ಸ್ವಾತಂತ್ರ್ಯ, ಸಮಾನತೆ, ಶಾಂತಿ, ಅಹಿಂಸೆ, ಸತ್ಯನಿಷ್ಠೆ, ಪ್ರಾಮಾಣಿಕತೆ, ಶಿಸ್ತು, ಜಾತ್ಯಾತೀತತೆ, ಅಸ್ಪೃಶ್ಯತೆ ನಿವಾರಣೆ, ಸ್ವಚ್ಛತೆ, ಶ್ರಮದಾನ ಹಾಗೂ ತಂಬಾಕು ಮತ್ತು ಮಾದಕ ವಸ್ತುಗಳಿಂದ ದೂರವಿರುವುದು ಮುಂತಾದ ಆದರ್ಶ ತತ್ವಗಳ ಹಾಗೂ ಜೀವನ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿ ಸುವುದು ಹಾಗೂ ಜೀವನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ವಾಗಿದ್ದು ಪ್ರೇರೇಪಿಸುವುದು.

ದೇಶದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದು ಈ ಐತಿಹಾಸಿಕ ಘಟನೆ ಶತಮಾನೋತ್ಸವನ್ನು ಪೂರೈಸುತ್ತಿರುವ ಹಿನ್ನಲೆಯಲ್ಲಿ ಈ ಕುರಿತು ಹಾಗೂ ಮಹಾತ್ಮ ಗಾಂಧಿಯವರ ಜನ್ಮ ದಿನ ಅಕ್ಟೋಬರ್ 2ಅನ್ನು ಪ್ರತಿ ವರ್ಷ ಅಂತರಾಷ್ಟ್ರೀ ಯ ಅಹಿಂಸಾ ದಿನವನ್ನಾಗಿ ವಿಶ್ವಸಂಸ್ಥೆಯಿಂದ ಆಚರಿಸಲಾಗುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು.

ಸದರಿ ದಿನದಂದು ಶ್ರಮದಾನವನ್ನು ಕೈಗೊಂಡು ಆಯಾ ಶಾಲೆಗಳ ಆವರಣ, ಸುತ್ತ-ಮುತ್ತ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಆಂದೋಲನ ವನ್ನು ಹಮ್ಮಿಕೊಳ್ಳುವುದು ಈ ಸಂದರ್ಭದಲ್ಲಿ ಅಗತ್ಯಾನುಸಾರಸ್ಥಳೀಯ ಸಂಸ್ಥೆಗಳ ಸಹಕಾರ ವನ್ನು ಪಡೆದುಕೊಳ್ಳುವುದು.

ಮಹಾತ್ಮ ಗಾಂಧಿಯವರ ಜಯಂತಿಯ ಮಹತ್ವ ವನ್ನು ಹಾಗೂ ತತ್ವಗಳನ್ನು ಮತ್ತು ಸಂದೇಶವನ್ನು ಸಾರ್ವಜನಿಕರಿಗೆ ವ್ಯಾಪಕವಾಗಿ ತಲುಪಿಸಲು ಆಯಾ ಊರಿನಲ್ಲಿ, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ 6 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಾಷ್ಟ್ರ ಧ್ವಜ ದೊಂದಿಗೆ, ರಾಷ್ಟ್ರ ಪ್ರೇಮವನ್ನು ಸಾರುವ ಘೋಷಣಾ ವಾಕ್ಯಗಳು ಉದ್ಧರಿಸುತ್ತಾ

1 ಕಿ.ಮೀ ಗೆ ಕಡಿಮೆಯಿಲ್ಲದಂತೆ ಜಾಥಾವನ್ನು ಕೈಗೊಳ್ಳತಕ್ಕದ್ದು ಹಾಗೂ ಕಡೆಯಲ್ಲಿ ಅಹಿಂಸೆ ಯನ್ನು ಪಾಲಿಸುವ ಬಗ್ಗೆ ಮತ್ತು ತಂಬಾಕು ಮತ್ತು ಮಾದಕ ವಸ್ತುಗಳಿಂದ ದೂರವಿರುವ ಕುರಿತಾದ ಪ್ರತಿಜ್ಞಾವಿಧಿಯನ್ನು ಕೈಗೊಳ್ಳತಕ್ಕದ್ದು.ಈ ದಿನ ದಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಗಳಿಗೆ ಸಿಹಿಯನ್ನು ಹಾಗೂ ಉಪಾಹಾರ ಮತ್ತು ಅಕ್ಷರ ದಾಸೋಹ ಯೋಜನೆಯಡಿಯ ಬಿಸಿ ಯೂಟವನ್ನು ವಿತರಿಸತಕ್ಕದ್ದು.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 02.10.2024 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಜಯಂತಿ ಯನ್ನು ಸಂಭ್ರಮಯುತವಾಗಿ ಮತ್ತು ವೈಶಿಷ್ಟ್ಯ ಪೂರ್ಣವಾಗಿ ಮೇಲ್ಕಂಡಂತೆ ಹಾಗೂ ಈ ಸಂಬಂಧ ಸರ್ಕಾರ ಸಂಬಂಧಿಸಿದ ಇಲಾಖೆಗಳು ಮತ್ತು ಜಿಲ್ಲಾಡಳಿತ ಕಾಲ-ಕಾಲಕ್ಕೆ ನೀಡುವ ಸೂಚನೆಗಳನ್ನು ಆಧರಿಸಿ ಕಡ್ಡಾಯವಾಗಿ ಆಚರಿ ಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಹಾಗೂ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಈ ಮೂಲಕ ಸೂಚಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk