ಬೆಂಗಳೂರು –
ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭವಾಗು ತ್ತಿದೆ ಈ ನಡುವೆ ಇಲಾಖೆ ಪ್ರಾಥಮಿಕ ಮತ್ತು ಪ್ರೌಡ ಶಾಲೆ ಗಳ ನೂತನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ ಹೌದು ಮೇ.29 ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು ಹೀಗಾಗಿ ಪರಿಷ್ಕೃತ ಹೊಸ ವೇಳಾಪಟ್ಟಿಯನ್ನು ಸಧ್ಯ ಇಲಾಖೆ ಬಿಡುಗಡೆ ಮಾಡಿದೆ
ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆ ಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.
ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜ ನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗ ಳನ್ನು ಅನುಷ್ಠಾನಗೊಳಿಸಲು ಸಹಾಯವಾಗು ವಂತೆ
ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು ರಜಾ ದಿನ ಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..