ಹುಬ್ಬಳ್ಳಿ ಧಾರವಾಡ –
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಲಾಗಿದ್ದು ಇನ್ನೂ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ರೇಣುಕಾ ಕೆ ಸುಕುಮಾರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಹೌದು ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ್ ಅವರನ್ನು ನೇಮಕ ಮಾಡಲಾಗಿದೆ.ರೇಣುಕಾ ಅವರು ಈ ಹಿಂದೆ ಕಮಿಷನರೇಟ್ ನಲ್ಲಿ ಉಪ ಪೊಲೀಸ್ ಆಯುಕ್ತ ರಾಗಿ (ಕಾನೂನು ಮತ್ತು ಸುವ್ಯವಸ್ಥೆ) ಸೇವೆ ಸಲ್ಲಿಸಿದ್ದರು.
ಆಗಸ್ಟ್ 9 ರಂದು ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
2011ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿ ರುವ ರೇಣುಕಾ ಅವರು ಪ್ರಸ್ತುತ ಡೆಪ್ಯೂಟಿ ಕಮಾಂಡೆಂಟ್ ಜನರಲ್, ಗೃಹ ರಕ್ಷಕರು ಮತ್ತು ಸಿವಿಲ್ ಡಿಫೆನ್ಸ್ ಪದನಿಮಿತ್ತ ಉಪ ನಿರ್ದೇಶಕ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇನ್ನೂ ರಾತ್ರಿ ನಗರಕ್ಕೆ ಆಗಮಿಸಿದ ರೇಣುಕಾ ಸುಕುಮಾರ ಅವರನ್ನು ಅವಳಿ ನಗರದ ಪೊಲೀಸ್ ಅಧಿಕಾರಿಗಳು ಸ್ವಾಗತಿಸಿಕೊಂಡು ಬರಮಾಡಿಕೊಂಡರು ವಿಮಾನ ನಿಲ್ದಾಣ ದಲ್ಲಿ ಬರಮಾಡಿಕೊಂಡರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..