7ನೇ ವೇತನ ಸೇರಿದಂತೆ ನೌಕರರ ಬೇಡಿಕೆ ಈಡೇರಿಸಿ – ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಮನವಿ…..

Suddi Sante Desk
7ನೇ ವೇತನ ಸೇರಿದಂತೆ ನೌಕರರ ಬೇಡಿಕೆ ಈಡೇರಿಸಿ – ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಮನವಿ…..

ಶಿವಮೊಗ್ಗ

ಒಪಿಎಸ್ ಜಾರಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ವರದಿ ಶೀಘ್ರ ಅನುಷ್ಠಾನ ಸೇರಿ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇ ರಿಕೆಗೆ ಆಗ್ರಹಿಸಿ ಮನವಿಯನ್ನು ನೌಕರರು ನೀಡಿ ದರು ಹೌದು ಈ ಒಂದು ಕೆಲ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಿವಮೊಗ್ಗ ದಲ್ಲಿ ಸರ್ಕಾರಿ ನೌಕರರು ಮನವಿ ಸಲ್ಲಿಸಿದರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಶಿವಮೊಗ್ಗ ಜಿಲ್ಲಾ ನೌಕರರ ಸಂಘದ ವತಿಯಿಂದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್. ಚನ್ನ ಬಸಪ್ಪ ಅವರಿಗೆ ಮನವಿ ನೀಡಿ ಒತ್ತಾಯಿಸಲಾ ಯಿತು.

ಏಳನೇ ವೇತನದ ಆಯೋಗದ ವರದಿಯನ್ನು ಶೀಘ್ರವಾಗಿ ಪಡೆದು ಅನುಷ್ಠಾನಗೊಳಿಸಬೇಕು. ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸ ಬೇಕು ಪ್ರಸ್ತುತ ಹೊಸ ಪಿಂಚಣಿ ವ್ಯವಸ್ಥೆಗೆ ಕಠಾವಣೆಯಾಗುತ್ತಿರುವ ನೌಕರರ ವಂತಿಕೆ ಯನ್ನು ಸ್ಥಗಿತಗೊಳಿಸುವಂತೆ ಕೋರಿ ನೌಕರರ ಪರವಾಗಿ ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ನೀಡಲಾಯಿತು.

ಅಲ್ಲದೆ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವಂ ತೆಯೂ ಮನವಿ ಮಾಡಲಾಯಿತು.ಮನವಿ ಸ್ವೀಕರಿಸಿದ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರು ಮಾತನಾಡಿ, ಪ್ರಸ್ತುತ ನೌಕರರು ನೀಡಿ ರುವ ಮನವಿಯಂತೆ ಸರ್ಕಾರಿ ನೌಕರರ ಅಗತ್ಯ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೌಕರ ಸಂಘದ ವಿಭಾಗಿಯ ಉಪಾಧ್ಯಕ್ಷ ಆರ್. ಮೋಹನ್ ಕುಮಾರ್, ಜಿಲ್ಲಾ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ, ಪಾಪಣ್ಣ, ನರಸಿಂಹಮೂರ್ತಿ, ಪ್ರಸನ್ನ ಕುಮಾರ್ ಮತ್ತಿತ ರರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.