ಗದಗ –
ನಿವೃತ್ತ SP B R ಹಿರೇಗೌಡರ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

72 ವಯಸ್ಸಿನ ಇವರು ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹುಬ್ಬಳ್ಳಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ನಿನ್ನೆ ಚಿಕಿತ್ಸೆ ಫಲಿಸದೇ ನಿಧನರಾದರು.ಮೃತ ನಿವೃತ್ತ ಪೊಲೀಸ್ ಅಧಿಕಾರಿಗಳು 38 ವರುಷಗಳ ಕಾಲ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಮೃತರು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಮಗ ಕೂಡಾ ಸಧ್ಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದಾರೆ. ಇನ್ನೂ ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಘಂಟೆಗೆ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆಯಲಿದೆ. ಮೃತ ನಿವೃತ್ತ ಪೊಲೀಸ್ ಅಧಿಕಾರಿ ನಿಧನಕ್ಕೆ ಗ್ರಾಮದ ಜನತೆ ಕಂಬನಿ ಮಿಡಿದಿದ್ದಾರೆ.