ಚಿಕ್ಕಮಗಳೂರು –
ಅಪಘಾತ ವೊಂದರಲ್ಲಿ ನಿವೃತ್ತ ದೈಹಿಕ ಶಿಕ್ಷಕ ರೊಬ್ಬರು ಸಾವಿಗೀಡಾದ ಘಟನೆ ಚಿಕ್ಕಮಗಳೂರಿ ನಲ್ಲಿ ನಡೆದಿದೆ.ಸಂಜೆ ಸುರಿದ ಧಾರಾಕಾರ ಮಳೆಯಲ್ಲಿ ಕಾರಿನಲ್ಲಿ ಹೊರಟಿದ್ದರು.ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದೆ.

ಕೂಡಲೇ ಸ್ಥಳದಲ್ಲೇ ಇದ್ದ ಸಾರ್ವಜನಿಕರು ಕಾರ್ಯಾಚರಣೆ ಮಾಡಿ ಕಾರಿನಲ್ಲಿ ಸಿಲುಕಿಕೊಂಡಿದ್ದ ಕೆ ಪಿ ಮೃತ್ಯುಂಜಯ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದರು.

ಆದರೂ ಚಿಕಿತ್ಸೆ ಫಲಿಸದೇ ಮೃತರಾದರು.ಬರೊಬ್ಬರಿ ಮೂವತ್ತು ವರ್ಷಗಳ ಕಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.ಆದರ್ಶ ಶಿಕ್ಷಕರಾಗಿದ್ದ ಇವರು ಸಾಕಷ್ಟು ಪ್ರಮಾಣದಲ್ಲಿ ಹೆಸರನ್ನು ಮಾಡಿದ್ದರು. ಇನ್ನೂ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ