ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಗೆ ರಚನೆಯಾಗಿರುವ 7ನೇ ರಾಜ್ಯ ವೇತನ ಆಯೋ ಗವು ನಿವೃತ್ತಿ ವೇತನ,ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ,ನಗರ ಪರಿಹಾರ ಭತ್ಯೆ,ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಯೂ ಅವಶ್ಯವಿರುವ ಬದಲಾವಣೆಗಳ ಕುರಿತು ಸಹ ಶಿಫಾರಸ್ಸು ಮಾಡಿದೆ.
ಸಾಮಾನ್ಯವಾಗಿ 5 ವರ್ಷಗಳಿಗೊಮ್ಮೆ ವೇತನ ಆಯೋಗ ಅಥವಾ ವೇತನ ಸಮಿತಿಯ ಶಿಫಾರಸ್ಸು ಆಧರಿಸಿ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು, ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು ಹಾಗೂ ವಿಶ್ವ ವಿದ್ಯಾನಿಲಯದ ಬೋಧಕೇತರ ಸಿಬ್ಬಂದಿಗಳ ವೇತನ ಹಾಗೂ ಭತ್ಯೆಗಳ ಪರಿಷ್ಕರಣೆ ಮಾಡಲಾ ಗುತ್ತದೆ.
6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸು ಆಧಾರದ ಮೇಲೆ ವೇತನ ಭತ್ಯೆಗಳನ್ನು ದಿನಾಂಕ 01/7/2017 ರಿಂದ ಜಾರಿಗೆ ಬರುವಂತೆ ಹಾಗೂ ಆರ್ಥಿಕ ಪ್ರಯೋಜನಗಳು ದಿನಾಂಕ 01/04/ 2018 ರಿಂದ ಅನ್ವಯವಾಗುವಂತೆ 2018 ರಲ್ಲಿ ಪರಿಷ್ಕರಿಸಲಾಗಿತ್ತು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..