ಬೆಂಗಳೂರು –
ಬಹುಕೋಟಿ ಐಎಂಎ ಹಗರಣ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಬಂಧನವಾಗಿದೆ, ಕಂಪನಿಯ ಸಂಸ್ಥಾಪಕ ಮನ್ಸೂರ್ ಖಾನ್ ಒತ್ತಡದಿಂದಾಗಿ ಸಿಬಿಐ ಭಾನುವಾರ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದೆ. ರೋಷನ್ ಬೇಗ್ ರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ವಿಚಾರಣೆ ಮಾಡಿದ ನ್ಯಾಯಾಧೀಶರು ರೋಷನ್ ಬೇಗ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ರು.ನಂತರ ನೇರವಾಗಿ ಅಲ್ಲಿಂದ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದರು.
ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್ ನೀಡಿ ರೋಷನ್ ಬೇಗ್ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ.ರೋಷನ್ ಬೇಗ್ ಅವರಿಗೆ ಮನ್ಸೂರ್ ಖಾನ್ 200 ಕೋಟಿ ಸೇರಿದಂತೆ ಐಷಾರಾಮಿ ಕಾರು, ಉಡುಗೊರೆ ನೀಡಿದ್ದ ಆರೋಪ ಈ ಪ್ರಕರಣ ಬೆಳಕಿಗೆ ಬಂದಾಗಲೇ ಈ ಆರೋಪ ಕೇಳಿ ಬಂದಿತ್ತು. ಆದರೆ ಈಗ ಮನ್ಸೂರ್ ಖಾನ್ ಒತ್ತಡ ಹಾಕಿದ್ದ ಕಾರಣ ಸಿಬಿಐ ಅಧಿಕಾರಿಗಳು ಮನೆಗೆ ತೆರಳಿ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸಂಜೆಯ ವೇಳೆ ಬಂಧಿಸಿದರು. ಸಧ್ಯ ರೋಷನ್ ಬೇಗ್ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದಾರೆ.