ಬೆಂಗಳೂರು –
ಶಾಲಾ ಮಕ್ಕಳಿಗೆ ಶೂಸ್ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾ ಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ.ಸಮವಸ್ತ್ರ ತಯಾ ರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ.ನಂತರ ವಿತರಣೆ ಯಾಗಲಿದೆ.ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಶೂಸ್,ಸಾಕ್ಸ್ ಕೊಡಲು ಸರ್ಕಾರದ ಬಳಿ ಹಣವಿಲ್ಲದಿದ್ದರೇ,ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಬಳಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದರು.ಇದಕ್ಕೆ ಪ್ರತಿಕ್ರಿಯೆ ನೀಡಿ ರುವ ಸಿಎಂ ಬೊಮ್ಮಾಯಿ ಈ ಹಿಂದೆ ಕೋವಿಡ್ ಸಮಯ ದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು.ಆ ಹಣ ಎಲ್ಲಿ ಎಂದು ಕೇಳಿದರು.ಎಂದಿನಂ ತೆಯೇ ಇದು ಕೂಡ ಎಂದು ಮುಖ್ಯಮಂತ್ರಿಗಳು ಮಂದ ಹಾಸ ಬೀರಿದರು.ಶಿಕ್ಷಣ ಸಚಿವ ನಾಗೇಶ್ ಅವರು ಮಕ್ಕಳು ಶಾಲೆಗೆ ಹೋಗುವುದು ಪಾಠ ಕಲಿಯಲೇ ಹೊರತು ಶೂಸ್ ಹಾಕಿಕೊಳ್ಳಲು ಅಲ್ಲ ಎಂದಿದ್ದರು.ಅದಕ್ಕೆ ಪ್ರತಿಕ್ರಿಯೆಯಾಗಿ ಡಿಕೆಶಿ ಭಿಕ್ಷೆ ಎತ್ತಿ ನೀಡುವ ಮಾತನಾಡಿದ್ದರು ಅದಕ್ಕೆ ಈಗ ಸಿಎಂ ಬೊಮ್ಮಾಯಿ ಈ ರೀತಿ ತಿರುಗೇಟು ನೀಡಿದ್ದಾರೆ.