ಬೆಂಗಳೂರು –
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪನವರು ಬೆಳಗಾವಿ ಮತ್ತು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಶಿವಮೊಗ್ಗದಿಂದ ರಸ್ತೆ ಮೂಲಕ ಧಾರವಾಡಗೆ ಆಗಮಿಸಿಲಿರುವ ಸಚಿವರು ಜನೇವರಿ 10 ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಪ್ರಗತಿ ಪರಶೀಲನಾ ಸಭೆ ಮಾಡಲಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪ್ರಗತಿ ಪರಿಶೀಲನಾ ಸಭೆ ಮಾಡಲಿದ್ದಾರೆ.ಇಡೀ ದಿನ ಸಭೆ ಮತ್ತು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಜೆ ರಸ್ತೆ ಮೂಲಕ ಬೆಳಗಾವಿಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾಧ್ಯಮ ಕಾರ್ಯದರ್ಶಿ ಕೆ.ಎಸ್.ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.