ಬೆಂಗಳೂರು –
ನಾಳೆಯಿಂದ ಪ್ರಾರಂಭವಾಗುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘವು ಶುಭಾಶಯಗಳನ್ನು ಕೋರಿದ್ದು ಧೈರ್ಯವಾಗಿ ಪರೀಕ್ಷೆಯನ್ನು ಎದುರಿಸಿ ಎಂದು ರಾಜ್ಯದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಶುಭಾಶಯಗಳನ್ನು ಕೋರಲಾಗಿದ್ದು ರಾಜ್ಯದ ಗ್ರಾಮೀಣ ಪ್ರೌಢ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಮತ್ತು ಸರ್ವ ಶಿಕ್ಷಕರು ಮತ್ತು ಪದಾಧಿಕಾರಿಗಳ ಪರವಾಗಿ ಶುಭಾಶಯ ಕೋರಿ ದ್ದಾರೆ.
ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದ್ದು ರಾಜ್ಯ ಸರ್ಕಾರ ಹಾಗೂ ಪರೀಕ್ಷಾ ಮಂಡಳಿ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಮಾಡಿದ್ದು ಈಗಾ ಗಲೇ ಸರ್ಕಾರ ಪರೀಕ್ಷೆ ಬರೆಯಲಿರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಬಸ್ಸಿನ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದ್ದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಯೋಜಿಸಲಾಗಿದ್ದು ವಿದ್ಯಾರ್ಥಿಗಳು ಶಿಸ್ತಿನಿಂದ ಶಾಂತತೆಯಿಂದ ಪರೀಕ್ಷೆಯನ್ನು ಬರೆದು ಕಲಿಸಿದ ಗುರುಗಳ ಶ್ರಮ ವ್ಯರ್ಥ ಮಾಡದೆ ಚೆನ್ನಾಗಿ ಪ್ರಶ್ನೆಗಳಿಗೆ ಉತ್ತರಿಸಬೇಕು ಶಾಲಾ ಸಮವಸ್ತ್ರ ದೊಂದಿಗೆ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ಆಗಬೇಕು ಕಲಿಸಿದ ತಂದೆ ತಾಯಿ ಗುರುಗಳ ಹೆಸರನ್ನು ತನ್ನಿ ಪರೀಕ್ಷಾ ಸಮಯದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಧೈರ್ಯದಿಂದ ಭಯವಿಲ್ಲದೆ ಪರೀಕ್ಷೆ ಎದುರಿಸಬೇಕೆಂದು ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಮತ್ತು ರಾಜ್ಯದ ಪದಾಧಿ ಕಾರಿಗಳು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ ಹಾಗೂ ಶುಭಾಶಯ ಕೋರಿದ್ದಾರೆ.