ವಿಜಯಪುರ –
ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಿದ್ದು ಇದ ರೊಂದಿಗೆ ವಿಜಯಪುರ ಮಹಾನಗರ ಪಾಲಿಕೆಯ ಚುಕ್ಕಾಣೆಯನ್ನು ಕೇಸರಿ ಪಕ್ಷವು ತನ್ನ ತೆಕ್ಕೆಗೆ ಹಾಕಿಕೊಂಡಿದ್ದು ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ಗಳಲ್ಲಿ ಚುನಾವಣೆ ನಡೆದಿದ್ದು 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದು 10 ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು ಸಿಕ್ಕರೆ 5 ವಾರ್ಡ್ ಗಳಲ್ಲಿ ಪಕ್ಷೇತರರು, 2 ವಾರ್ಡ್ ಗಳಲ್ಲಿ ಐಎಂಐಎ, 1 ವಾರ್ಡ್ ನಲ್ಲಿ ಜೆಡಿಎಸ್ ಗೆಲುವು ಸಾಧಿಸಿದ್ಗಾರೆ ಇದರೊಂದಿಗೆ ಪಾಲಿಕೆಯಲ್ಲಿ ಬಿಜೆಪಿ ಪಕ್ಷವು ಮತ್ತೆ ಮರಳಿ ಅಧಿಕಾರಕ್ಕೆ ಬಂದಿದ್ದು ತನ್ನ ತೆಕ್ಕೆಗೆ ಹಾಕಿಕೊಂಡಿದೆ.