ಧಾರವಾಡ –
ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಸಾಹಿತಿ ಶಂಕರ ಹಲಗತ್ತಿ ಗೆಲುವು ಸಾಧಿಸಿದ್ದಾರೆ.ಇಂದು ನಡೆದ ಮತ ಎಣಿಕೆಯಲ್ಲಿ ಗೆಲುವು ಸಾಧಿಸಿ ಮತ್ತೊಂದು ಬಾರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಏರಿದರು
ಫಲಿತಾಂಶ ಹೊರ ಬೀಳುತ್ತಿದ್ದಂತೆ ಅವರ ಅಭಿಮಾನಿಗಳು ಆಪ್ತರು ಕಾರ್ಯಕರ್ತರು ಬಂಧುಗಳು ಅವರನ್ನು ಹೊತ್ತು ಕೊಂಡು ಮೆರವಣಿಗೆ ಮಾಡಿ ಸಂಭ್ರಮಿಸಿದರು.ಶಿಕ್ಷಕ ಬಂಧುಗಳು ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿ ದರು.ಅದರಲ್ಲೂ ವಿಶೇಷವಾಗಿ ಶಿಕ್ಷಕ ರಾದ ಎಲ್ ಐ ಲಕ್ಕಮ್ಮನವರ,ಗುರು ತಿಗಡಿ,ಚಂದ್ರಶೇಖರ್ ತಿಗಡಿ,ಶಂಕರ ಘಟ್ಟಿ,ಅಯ್ಯಪ್ಪ ಮೊಕಾಶಿ,ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದರು
























