5,8,9ನೇ ತರಗತಿ ಮೌಲ್ಯಮಾಪನದಲ್ಲಿ ದೋಷ ಗೊಂದಲ ಕುರಿತಂತೆ ಶೀಘ್ರದಲ್ಲೇ ಹೋರಾಟದ ಎಚ್ಚರಿಕೆ ನೀಡಿದ ಶಶಿಕುಮಾರ್…..

Suddi Sante Desk
5,8,9ನೇ ತರಗತಿ ಮೌಲ್ಯಮಾಪನದಲ್ಲಿ ದೋಷ ಗೊಂದಲ ಕುರಿತಂತೆ ಶೀಘ್ರದಲ್ಲೇ ಹೋರಾಟದ ಎಚ್ಚರಿಕೆ ನೀಡಿದ ಶಶಿಕುಮಾರ್…..

ಬೆಂಗಳೂರು

5,8,9ನೇ ತರಗತಿ ಮೌಲ್ಯಮಾಪನದಲ್ಲಿ ದೋಷ ಗೊಂದಲ ಕುರಿತಂತೆ ಶೀಘ್ರದಲ್ಲೇ ಹೋರಾಟದ ಎಚ್ಚರಿಕೆ ನೀಡಿದ ಶಶಿಕುಮಾರ್ ಹೌದು

2023-24ನೇ ಸಾಲಿನ 5, 8 ಹಾಗೂ 9ನೇ ತರಗತಿ ಸಂಕಲನಾತ್ಮಕ ಮೌಲ್ಯಾಂಕನ(ಎಸ್‌ಎ-2) ಪೂರ್ಣಗೊಂಡಿದ್ದು ಮೌಲ್ಯಮಾಪನದಲ್ಲಿ ಹಲವು ದೋಷಗಳು ಉಳಿದುಕೊಂಡಿವೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಆರೋಪಿಸಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿಸಲಾಗಿದೆ.ಸರಿ ಉತ್ತರಗಳಿಗೂ ಅಂಕ ಕಡಿತ ಮಾಡಲಾಗಿದೆ.ಕೆಲ ಬಂಡಲ್‌ಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನವೇ ಮಾಡಿಲ್ಲ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕಗಳು ಬಂದಿವೆ.8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗಿದೆ ಎಂದು ಹಲವು ಶಿಕ್ಷಣ ಸಂಸ್ಥೆಗಳು ಮಾಹಿತಿ ನೀಡಿವೆ.ಗೊಂದಲಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.