ಕ್ಷೇತ್ರ ಬದಲಿಸಿದ ಸತೀಶ್ ಜಾರಕಿಹೊಳಿ – ಯಮಕನಮರಡಿ ಕ್ಷೇತ್ರದಿಂದ ಯಾವ ಕ್ಷೇತ್ರದಿಂದ ಸ್ಪರ್ಧೆ ಗೊತ್ತಾ…..

Suddi Sante Desk

ಬೆಳಗಾವಿ –

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರವನ್ನು ಬದಲಾಯಿ ಸಲು ತಿರ್ಮಾನವನ್ನು ಕೈಗೊಂಡಿದ್ದು ಈ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೇ ಮಾಹಿತಿ ನೀಡಿದ್ದು ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡುತ್ತಿರುವುದು ನಿಜ ಎಂದು ಹೇಳಿದರು

ನಾನು ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿ ದ್ದೇನೆ.ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಿದೆ ಇದಕ್ಕಾಗಿ ಕ್ಷೇತ್ರದಲ್ಲಿ ನಮ್ಮದೇ ಆದ ಸಂಘಟನಾ ಶಕ್ತಿ ಬಲ ಪಡಿಸುತ್ತಿದ್ದೇವೆ ಎಂದರು.ಇನ್ನೂ ಯಮಕನಮರಡಿ ಕ್ಷೇತ್ರ ದಿಂದ ತಮ್ಮ ಪುತ್ರ ರಾಹುಲ್ ಸ್ಪರ್ಧೆ ವಿಚಾರದ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ.ಯಮಕನಮರಡಿ ಮತ್ತು ಸವದತ್ತಿ ಕ್ಷೇತ್ರಗಳಲ್ಲದೆ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 12 ಕಡೆ ಗೆದ್ದರೆ ಸರ್ಕಾರ ರಚನೆಗೆ ಅನುಕೂಲವಾಗ ಲಿದೆ ಎಂದು ಅವರು ಹೇಳುತ್ತಾ ಹೊಸ ಕ್ಷೇತ್ರದ ಸ್ಪರ್ಧೆಯ ಬಗ್ಗೆ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿ ಯಮಕನಮ ರಡಿ ಕ್ಷೇತ್ರವನ್ನು ಯಾರಿಗೆ ಬಿಟ್ಟುಕೊಡಲಿದ್ದಾರೆ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಕುತೂಹಲವನ್ನು ಕೆರಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.