ಕೊಪ್ಪಳ –
20 ಕ್ಕೂ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಅಸ್ವಸ್ಥ ಗೊಂಡ ಘಟನೆ ಕೊಪ್ಪಳ ದಲ್ಲಿ ನಡೆದಿದೆ.ಹೌದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಬೆಳಗಿನ ಉಪಹಾರದ ನಂತರ ಅಸ್ವಸ್ಥಗೊಂಡಿದ್ದಾರೆ ಮಕ್ಕಳು.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕುಷ್ಟಗಿ ತಾಲೂಕಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಉಪಹಾರ ನಂತರ ಮಕ್ಕಳಲ್ಲಿ ಕಾಣಿಸಿಕೊಂಡಿದೆ ವಾಂತಿ 194 ಮಕ್ಕಳ ಪೈಕಿ 20 ಹೆಚ್ಚು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.ಕಳಪೆ ಆಹಾರವನ್ನು ನೀಡಿರುವ ಆರೋಪ ಕೇಳಿ ಬಂದಿದೆ
ವಸತಿ ನಿಲಯದ ವಿರುದ್ದ ಪೋಷಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದು ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ