ದಾವಣಗೆರೆ –
ದಿನೇ ದಿನೇ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲೋದು ಹೆಚ್ಚಾಗಿದೆ.ಈಗಾಗಲೇ ವಸತಿ ಶಾಲೆಗಳ ವಿದ್ಯಾರ್ಥಿಗಳು,ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದ್ದ ಕೊರೋನಾ ದಾವಣಗೆರೆಯ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ಶಾಕ್ ನೀಡಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿರುವ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಲೆಯ ನಾಲ್ಕು ಕೊಠಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಅಂದ ಹಾಗೇ ದೇವರಹಳ್ಳಿಯ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟ ಕಾರಣ ಇನ್ನುಳಿದ ಶಾಲೆಯ 497 ವಿದ್ಯಾರ್ಥಿಗಳು 57 ಬೋಧಕ ಬೋಧಕೇತರ ಸಿಬ್ಬಂದಿ ಕೋವಿಡ್ ಟೆಸ್ಟ್ ಗೆ ಒಳಪಡಿಸ ಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದ್ದು ಪಾಸಿಟಿವ್ ಬಂದಂತ ನಾಲ್ವರು ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿಯನ್ನು ಜಿನೋ ಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಕಳುಹಿಸಿ ಕೊಡಲಾಗಿದ್ದು ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಆರೋಗ್ಯ ಇಲಾಖೆಯ ಅಧಿಕಾರಿಗಳಿದ್ದಾರೆ.