ಬೆಂಗಳೂರು –
ಕೋವಿಡ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೇ ಶಿಪಾರಸ್ಸು ಮಾಡಿದೆ. ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭಿಸಬೇಕೆ ಬೇಡ ಎಂಬ ಕುರಿತಂತೆ ಪೋಷಕರಿಂದ ಮಾಹಿತಿಯನ್ನು ಕೇಳಿತ್ತು ಇದರಿಂದ ತಾಂತ್ರಿಕ ಸಲಹಾ ಸಮಿತಿಯವರು ರಾಜ್ಯ ಸರ್ಕಾರಕ್ಕೇ ವರದಿಯೊಂದನ್ನು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳನ್ನು ಆರಂಭ ಮಾಡದಂತೆ ಸಮಿತಿ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಕೊರೋನಾ ಪರಿಸ್ಥಿತಿ ಇನ್ನೂ ಪೂರ್ಣವಾಗಿ ತಹಬಂಧಿಗೆ ಬಾರದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನಾರಂಭ ಮಾಡದಿರಲು ಸರಕಾರ ನಿರ್ಧರಿಸಿದೆ.

ಈ ಸಂಬಂಧ ಬೆಂಗಳೂರಿನ ವಿಧಾನಸೌಧದಲ್ಲಿ ಕರೆಯಲಾಗಿದ್ದ ಉನ್ನತ ಮಟ್ಟದ ಸಭೆಯಲ್ಲಿ ಶಾಲಾ ಪುನಾರಂಭಕ್ಕೆ ಈಗ ಸಕಾಲ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.ಡಿಸೆಂಬರ್ ತಿಂಗಳಿನಲ್ಲಿ ಶಾಲೆಗಳು ಮತ್ತೆ ಆರಂಭವಾಗಬಹುದು ಎಂಬ ನಿರೀಕ್ಷೆ ಈ ಮೂಲಕ ಹುಸಿಯಾಗಿದೆ.ಡಿಸೆಂಬರ್ ಬಳಿಕ ಅಂದರೆ ಮುಂದಿನ ವರ್ಷಾರಂಭದಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಮುಂದೆ ನಿಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ತಾಂತ್ರಿಕ ಸಮಿತಿ ವಿರೋಧ
ಈ ಮಧ್ಯೆ ಡಿಸೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ಮತ್ತೆ ಆರಂಭಿಸುವುದಕ್ಕೆ ತಾಂತ್ರಿಕ ಸಲಹಾ ಸಮಿತಿ ಸಹ ವಿರೋಧ ವ್ಯಕ್ತಪಡಿಸಿತ್ತು.
ಚಳಿಗಾಲವೂ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ.

ಸೆಪ್ಟೆಂಬರ್ ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಟ್ಟಿತ್ತು.ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು .ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡಾ ಭಾಗಿಯಾಗಿ ಮುಖ್ಯಮಂತ್ರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು ಅಲ್ಲದೇ ಕೆಲ ಮಾಹಿತಿಯನ್ನು ನೀಡಿದರು.

ಇದರಿಂದ ಯಾವುದೇ ಕಾರಣಕ್ಕೂ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳನ್ನು ತೆರೆಯೊದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಸ್ಟಪಡಿಸಿದರು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ ಶಾಲೆ ಹಾಗು ಪದವಿ ಪೂರ್ವ ಕಾಲೇಜು ಆರಂಭದ ಬಗ್ಗೆ ಇಂದು ಸಭೆಯಾಗಿದೆ ಸಭೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು ರಾಜ್ಯದ ವಾಸ್ತವ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದೆ .ಕೊವಿಡ್ ತಾಂತ್ರಿಕ ಸಮಿತಿ ನೀಡಿರೋ ವರದಿ ಆರೋಗ್ಯ ಸಚಿವ ಸುಧಾಕರ್ ಕೊಟ್ಟಿದ್ದಾರೆ ಡಿಸೆಂಬರ್ ನಲ್ಲಿ ಚಳಿಗಾಲ ಇದೆ ಹೀಗಾಗಿ ಶಾಲೆ ತೆರೆಯೋದು ಬೇಡ ಎಂದು ಚರ್ಚೆಯಾಗಿದೆ 1 ರಿಂದ 8ನೇ ತರಗತಿ ಆರಂಭದ ಬಗ್ಗೆ ನಾವು ಯೋಚನೆ ಮಾಡಿಲ್ಲ ಪಬ್ಲಿಕ್ ಪರೀಕ್ಷೆ ಇರೋದ್ರಿಂದ 9 ಹಾಗು 10 ಪದವಿ ಪೂರ್ವ ತರಗತಿ ಆರಂಭದ ಬಗ್ಗೆ ಚರ್ಚೆಯಾಗಿದೆ ಡಿಸೆಂಬರ್ ಮೂರನೇ ವಾರದಲ್ಲಿ ಮತ್ತೊಂದು ಸುತ್ತಿನ ಸಭೆ ಮಾಡಿ ಅಂತಿಮ ತೀರ್ಮಾನ ತೆಗದುಕೊಳ್ಳುತ್ತೇವೆ ಎಂದು ಹೇಳಿದರು.ಒಟ್ಟಿನಲ್ಲಿ ಸದ್ಯಕ್ಕಂತೂ ಶಾಲೆಗಳನ್ನು ತೆರೆಯೋದು ಬೇಡ ಎಂಬುದು ಎಲ್ಲರ ಸಹಮತವಾಗಿದೆ. ಹೀಗಾಗಿ ಸದ್ಯಕ್ಕೆ ಶಾಲೆಗಳು ತೆರೆಯುವುದು ಬಹುತೇಕ ಅನುಮಾನವಾಗಿದೆ. ಡಿಸೆಂಬರ್ ನಂತರ ಕೊರೋನಾ ವೈರಸ್ ಸೋಂಕು ಪರಿಸ್ಥಿತಿ ನೋಡಿಕೊಂಡು ಶಾಲಾ-ಕಾಲೇಜು ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸದ್ಯ ಪೋಷಕರು ಶಾಲೆ ಪುನರಾರಂಭಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಶಾಲೆಗಳಿಗೆ ರಜೆ ಮುಂದುವರೆಯಲಿದೆ.