ಬೆಂಗಳೂರು –
ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮೇ 29 ರಿಂದ ಪುನರಾರಂಭವಾ ಗುತ್ತಿದ್ದು ಮೊದಲ ದಿನದಿಂದಲೇ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾ ಗಿದೆ 2024-25 ನೇ ಸಾಲಿನ ಶಿಕ್ಷಣವನ್ನು ‘ಶೈಕ್ಷಣಿಕ ಬಲವರ್ಧನೆ’ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷ ವಾಕ್ಯ ಸಿದ್ಧಪಡಿಸಿದ್ದು,
ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ ಮುಖ್ಯ ಶಿಕ್ಷಕರು, ಕೆಲ ಸಹ ಶಿಕ್ಷಕರು ಶಾಲೆ ಆರಂಭಕ್ಕೂ ಎರಡು ದಿನಗಳ ಮೊದಲೇ ಕೆಲಸಕ್ಕೆ ಹಾಜರಾಗಿದ್ದು ಸಿದ್ಧತೆಗಳನ್ನು ಮಾಡಿ ಕೊಂಡಿದ್ದಾರೆ.
ಶಾಲೆಯ ಅಂಗಳ ಹಾಗೂ ಶಾಲಾ ಕೊಠಡಿ, ಶೌಚಾಲಯಗಳನ್ನು ಈಗಾಗಲೇ ಸ್ವಚ್ಛಗೊಳಿಸ ಲಾಗಿದೆ. ಬಹುತೇಕ ಕಡೆ ಸಣ್ಣಪುಟ್ಟ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ. ಮಾವಿನ ತೋರಣ, ಬಾಳೆಕಂದು ಕಟ್ಟಿ, ರಂಗೋಲಿ ಬಿಡಿಸಿ ಶಾಲೆಗಳನ್ನು ಸಿಂಗಾರಗೊಳಿಸುವ ಕೆಲಸ ಸಾಗಿದೆ. ಶಾಲಾ ಆರಂಭದ ದಿನ ಒಂದು ರೀತಿ ಹಬ್ಬದ ಸಂಭ್ರಮವಿರಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..