ಬೆಂಗಳೂರು –
ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಸಂಬಂಧ ನಿನ್ನೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಕೊನೆಗೂ ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಠಾಣೆಯ ತನಿಖಾಧಿಕಾರಿಗಳ ಮುಂದೆ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಸಂಬಂಧ ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡಿದರು.ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ವಿಚಾರಣೆ ನಡೆಸಿದರು.

ವಿಚಾರಣೆ ಮುಗಿಸಿ, ಹೊರಬಂದ ನಂತ್ರ ಮಾತನಾಡಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ, ಪೊಲೀಸರು ಕೇಳಿದಂತ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತಷ್ಟು ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ. ಅವುಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಸಲಿದ್ದೇನೆ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.