ಚಿಕ್ಕಬಳ್ಳಾಪೂರ –
ಪ್ರತಿಷ್ಠಿತ ಖಾಸಗಿ ಶಾಲೆಯ ಕಿರುಕುಳಕ್ಕೆ ಬೇಸತ್ತ ಶಿಕ್ಷಕನೊರ್ವ ಸೆಲ್ಪಿ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು ಇಂಥಹದೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರತಿಷ್ಠಿತ ಮಂಚೇನಹಳ್ಳಿ ಆಚಾರ್ಯ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿರುವ ಚಂದ್ರಶೇಖರ್ (35) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಶಿಕ್ಷಕ 5 ನೇ ವಾರ್ಡ್ ಲಕ್ಮೀಪುರದ ತನ್ನ ಟ್ಯೂಟೋರಿಯಲ್ ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಆಚಾರ್ಯ ಅನುದಾನಿತ ಶಾಲೆಯ ಆಡಳಿತ ಮಂಡಳಿ ಕಾರಣ ಅಂತ ಬೋರ್ಡ್ ಮೇಲೆ ಬರೆದಿದ್ದಾರೆ.
ಕಳೆದ 8 ವರ್ಷಗಳಿಂದ ಆಚಾರ್ಯ ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕನಾಗಿದ್ದರು. ಇನ್ನೂ ಆತ್ಮಹತ್ಯೆಗೂ ಮುನ್ನ ಸೆಲ್ಫೀ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಶಿಕ್ಷಕ ಚಂದ್ರಶೇಖರ್.
ಆಚಾರ್ಯ ಶಾಲೆಯ ಆಡಳಿತ ಮಂಡಳಿ ವಿರುದ್ಧ ಹತಾಶೆ ಮನಸ್ಥಿತಿಯಲ್ಲಿ ವೀಡಿಯೋವೊಂದನ್ನು ಮಾಡಿ ನಂತರ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.ಶಿಕ್ಷಕ ಚಂದ್ರಶೇಖರ ಆತ್ಮಹತ್ಯೆ ವಿಡಿಯೋ ಫೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿವೆ.
ಇದರೊಂದಿಗೆ ಟ್ಯೂಶನ್ ಬೊರ್ಡ್ ಮೇಲೆ ಮಕ್ಕಳೇ ನಿಮಗೆ ಒಳ್ಳೇಯದಾಗಲಿ ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾರೆ.
ವಿಷಯ ತಿಳಿದ ಮಂಚೇನಹಳ್ಳಿ ಪೊಲೀಸರು ಸ್ಥಳಕ್ಕ ಭೇಟಿ ನೀಡಿ ಪರಿಶೀಲನೆ ಮಾಡಿದ್ರು. ಈ ಕುರಿತಂತೆ ಪ್ರಕರಣವೊಂದನ್ನು ದಾಖಲು ಮಾಡಿಕೊಂಡಿರುವ ಮಂಚೇನಹಳ್ಳಿ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.