This is the title of the web page
This is the title of the web page

Live Stream

[ytplayer id=’1198′]

November 2024
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಆಯ್ಕೆ – ಹಿರಿಯ ಸಾಹಿತಿಗೆ ಸಮ್ಮೇಳನದ ಅಧ್ಯಕ್ಷತೆಯ ಜವಾಬ್ದಾರಿ…..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಆಯ್ಕೆ – ಹಿರಿಯ ಸಾಹಿತಿಗೆ ಸಮ್ಮೇಳನದ ಅಧ್ಯಕ್ಷತೆಯ ಜವಾಬ್ದಾರಿ…..
WhatsApp Group Join Now
Telegram Group Join Now

ಬೆಂಗಳೂರು  –

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪರನ್ನು  ಆಯ್ಕೆ ಮಾಡಲಾ ಗಿದೆ ಹೌದು ಮಂಡ್ಯದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಗೊ.ರು.ಚನ್ನಬಸಪ್ಪ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಡಿಸೆಂಬರ್​ 20ರಿಂದ ಮಂಡ್ಯಡಲ್ಲಿ ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದೆ.1942ರಿಂದ 95ರ ವರೆಗೆ ಕಸಾಪ ಅಧ್ಯಕ್ಷರಾಗಿದ್ದರು ಗೊ.ರು.ಚ ಅವರು.1942ರಿಂದ 95ರ ವರೆಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಗೊ.ರು.ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೋಂಡೆದಹಳ್ಳಿಯಲ್ಲಿ 1930ರ ಮೇ. 18ರಂದು ಜನಿಸಿದರು.

ಗಾಂಧಿ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಗೊರುಚ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ.ಭಾರತ್ ಸ್ಕೌಟ್ಸ್ ಗೆಡ್ಸ್‌ ಗಳಿಗೆ ಹೆಡ್‍ಕ್ವಾರ್ಟರ್ಸ್ ಕಮೀಷನರ್, 2008ರಿಂದ ಕರ್ನಾಟಕ ಜಾನಪದ ಅಕಾಡಮಿ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ದ್ದಾರೆ.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ವೇಳೆ 1993ರಲ್ಲಿ ಕೊಪ್ಪಳ, 1994ರಲ್ಲಿ ಮಂಡ್ಯ 1995ರಲ್ಲಿ ಮುಧೋಳಗಳಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಇವರ ಅವಧಿಯಲ್ಲಿ ಅನೇಕ ಮೌಲಿಕ ಗ್ರಂಥಗಳನ್ನು ಪ್ರಕಟಿಸಿದ್ದು, ‘ಜಾನಪದ ಜಗತ್ತು’, `ಪಂಚಾಯತ್ ರಾಜ್ಯ’, `ಕನ್ನಡ ಸಾಹಿತ್ಯ ಪರಿಷತ್ಪತ್ರಿಕೆ’ ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk