ಬೆಂಗಳೂರು –
ಹೌದು OPS ಜಾರಿಗೆ ಒತ್ತಾಯಿಸಿ ಈಗಾಗಲೇ ರಾಜ್ಯದಲ್ಲಿ ಒಂದು ಕಡೆ ಹೋರಾಟಗಳು ನಡೆಯುತ್ತಿರುವ ನಡುವೆ ಈ ಒಂದು ನಿರೀಕ್ಷೆಯ ಲ್ಲಿದ್ದ ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್ ವೊಂದನ್ನು ಮುಖ್ಯಮಂತ್ರಿ ನೀಡಿದ್ದಾರೆ
ಹೌದು ಈ ಒಂದು ನಿರೀಕ್ಷೆ ಯಲ್ಲಿದ್ದ ರಾಜ್ಯದ ಸಮಸ್ತ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಶಾಕ್ ನೀಡಿದ್ದಾರೆ ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವ ಣಾ ಪೂರ್ವದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆ ಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆ ಹೊಸ ಪಿಂಚಣಿ ಯೋಜನೆ
ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿ ಗೊಳಿಸುವುದಾಗಿ ಭರವಸೆ ನೀಡಿತ್ತು.ಆದ್ರೇ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ನಿರ್ಧರಿಸಿಲ್ಲ ಎಂಬುದಾಗಿ ತಿಳಿಸಿದೆ.
ಈ ಮೂಲಕ OPS ಜಾರಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ.ಈ ಬಗ್ಗೆ ವಿಧಾನಪರಿಷತ್ ನಲ್ಲಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಿದ್ದಾರೆ.
ರಾಜ್ಯದಲ್ಲಿ NPS ಯೋಜನೆಯಡಿ ಇರುವ ಸರ್ಕಾರಿ ನೌಕರರು ಎಷ್ಟು ಎಂಬುದಕ್ಕೆ ಉತ್ತರಿಸಿ 24-06-2023ಕ್ಕೆ ಇದ್ದಂತೆ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಂಖ್ಯೆ 3,04,511. ಇದು ಸ್ವಾಯತ್ತ ಸಂಸ್ಥೆಯ ನೌಕರರು ಒಳಗೊಂಡಂತ ಸಂಖ್ಯೆ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಇಲ್ಲ ಎಂದು ಉತ್ತರಿಸಿದ್ದಾರೆ.ಇನ್ನೂ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಇಲ್ಲ ಎಂದು ಉತ್ತರಿಸಿದ್ದಾರೆ.
ಹಾಗಿದ್ದಲ್ಲಿ ಎನ್ ಪಿಎಸ್ ಯೋಜನೆಯನ್ನು ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಯಾವಾಗ ಜಾರಿ ಮಾಡಲಾಗುವುದು ಎಂದು ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 01-03-2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ ಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ
ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..