ಬೆಂಗಳೂರು –
ಹೊಸ ಪಿಂಚಣಿ ವ್ಯವಸ್ಥೆ ವಿರುದ್ದ ಡಿಸೆಂಬರ್ 19 ರಂದು ಕರೆ ನೀಡಿರುವ ಬೃಹತ್ ಪ್ರಮಾಣದ ಹೋರಾಟದ ಬೆನ್ನಲ್ಲೇ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಹೊಸ ಪಿಂಚಣಿ ವ್ಯವಸ್ಥೆ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ರಾಜ್ಯದ ಸರ್ಕಾರಿ ನೌಕರರ ಸಂಘದಿಂದ ಮಾಡು ಇಲ್ಲವೇ ಮಡಿ ಹೋರಾಟವನ್ನು ಮಾಡೊದಾಗಿ ಹೇಳಿದ್ದು ಶೀಘ್ರ ದಲ್ಲೇ ಈ ಕುರಿತಂತೆ ಹೋರಾಟಕ್ಕೆ ಕರೆ ನೀಡೊ ದಾಗಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದೆ ಈ ಕುರಿತಂತೆ ಎನ್.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು ಇಲ್ಲವೇ ಮಡಿ’ ಹೋರಾ ಟವನ್ನು ಹಮ್ಮಿಕೊಳ್ಳಲಾಗಿದೆ.
ಹೊಸ ಪಿಂಚಣಿ ವ್ಯವಸ್ಥೆ ಜಾರಿಯಾಗಿರುವ ಕಾರಣ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಯಾವುದೇ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮರು ಜಾರಿ ಗೊಳಿಸಬೇಕು ಎಂದು ಈ ಹೋರಾಟ ನಡೆದಿದ್ದು ಇದರ ಮಧ್ಯೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಕೂಡಾ ಈ ಒಂದು ಹೋರಾಟವನ್ನು ಬೆಂಬಲಿ ಸಿದ್ದಾರೆ.ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ರದ್ದುಗೊಳಿಸಲು ಆಗ್ರಹಿಸಿ ಏಪ್ರಿಲ್ ನಿಂದ ನಿರ್ಣಾಯಕ ಹೋರಾಟ ರೂಪಿಸಲಾಗುತ್ತದೆ ಎಂದು ಹೇಳಿದರು.
ಇದರೊಂದಿಗೆ ಎರಡನೇಯ ಹಂತದ ಮತ್ತೊಂದು ಹೋರಾಟಕ್ಕೆ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಷಡಾಕ್ಷರಿ ಅವರು ಕರೆ ನೀಡಿ ಸುಳಿವನ್ನು ನೀಡಿದ್ದು ರಾಜ್ಯ ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..