ಶಿವಮೊಗ್ಗ –
ಕರ್ನಾಟಕದಲ್ಲಿ ಹಳೆ ಪಿಂಚಣಿ ಜಾರಿ ಆಗಬೇಕು ಎಂಬುದು ಸರ್ಕಾರಿ ನೌಕಕರರ ಬಹು ದಿನಗಳ ಬೇಡಿಕೆಯಾಗಿದ್ದು ರಾಜ್ಯ ಸರಕಾರಿ ನೌಕರರ ಸಂಘವು ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸಲು ಒತ್ತಾಯಿಸಿದೆ. ಸರ್ಕಾರಿ ನೌಕರರ ಆರ್ಥಿಕ ಭದ್ರತೆಗಾಗಿ ಈ ಕ್ರಮ ಅಗತ್ಯ ಎಂದು ಸರ್ಕಾರಿ ನೌಕರರು ಮನವಿ ಮಾಡಿದ್ದು, ಸಮಿತಿಯು ಶೀಘ್ರದಲ್ಲೇ ವರದಿ ಸಲ್ಲಿಸುವ ಭರವಸೆ ನೀಡಿದೆ.ಅಲ್ಲದೇ ಸರ್ಕಾರ ಕೊಟ್ಟ ಭರವಸೆಯನ್ನ ಈಡೇಸದಿದ್ದಾರೆ ಹೋರಾಟ ಮಾಡುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ ಕೊಟ್ಟಿದ್ದಾರೆ.
ಆರ್ಥಿಕ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ 2004ರಲ್ಲಿ ಕೇಂದ್ರ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದೇಶದಾದ್ಯಂತ ಅನ್ವಯಿ ಸಿತು. ಅಂದಿನಿಂದಲೂ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆಯ ಮರು ಜಾರಿಗೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಕರ್ನಾಟದಲ್ಲಿ ಸರ್ಕಾರಿ ನೌಕರರ ಬೇಡಿಕೆಗೆ ಮಣಿದಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಳೆ ಪಿಂಚಣಿ ಜಾರಿ ಕುರಿತು ಭರವಸೆ ನೀಡಿದ್ದು ಇದೀಗ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಪಟ್ಟು ಹಿಡಿದಿದ್ದಾರೆ.
ಇನ್ನೂ ಹಳೆ ಪಿಂಚಣಿ ಯೋಜನೆ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಾಡಕ್ಷರಿ ಅವರು ಮಾತನಾಡಿ, ಎನ್ ಪಿ ಎಸ್ ರದ್ದುಗೊಳಿಸಬೇಕು. ಓಪಿಎಸ್ ಜಾರಿಗೊಳಿಸಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದೆ. ಸರ್ಕಾರ ಈ ನಿಟ್ಟಿನಲ್ಲಿಯೂ ಕ್ರಮವಹಿಸಿದೆ. ಒಂದು ವೇಳೆ ಜಾರಿಗೊಳಿಸದೇ ಹೋದರೇ ಓಪಿಎಸ್ ಜಾರಿಗೆ, ಕೇಂದ್ರದ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ವೇತನ ನೀಡು ವುದಕ್ಕೆ ಹೋರಾಟ ರೂಪಿಸಲಿದೆ ಎಂಬುದಾಗಿ ಸಿ.ಎಸ್ ಷಡಕ್ಷರಿ ಹೇಳಿದರು.
ರಾಜ್ಯದಲ್ಲಿ 2.90 ಲಕ್ಷ ಎನ್ ಪಿ ಎಸ್ ನೌಕರರು ಇದ್ದಾರೆ. ಈಗಾಗಲೇ ವಿವಿಧ ಹಂತಗಳಲ್ಲಿ ಸರ್ಕಾರಿ ನೌಕರರ ಸಂಘದ ಪ್ರಯತ್ನದಿಂದಾಗಿ ಎನ್ ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಯಾಗಲಿದೆ. ಇಂತಹ ಹತ್ತಾರು ಬದಲಾವಣೆಯನ್ನು ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಮಾಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರಿಗೆ ನೀಡುವಂತ ವೇತನ ಮಾದರಿಯಲ್ಲೇ ವೇತನ ಕ್ರಮ ಜಾರಿಯಾಗಬೇಕಿದೆ. ಈಗಾಗಲೇ ಈ ಸಂಬಂಧ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದಿದ್ದೇವೆ. ದೇಶದ 22 ರಾಜ್ಯಗಳು ಸೆಂಟ್ರಲ್ ಪೇ ಯೋಜನೆ ಜಾರಿಗೆ ತಂದಿರುವುದನ್ನು ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಯೋಜನೆ ಜಾರಿಯಾಗಿದ್ದು 1.72 ಲಕ್ಷ ಮಹಿಳಾ ನೌಕರರು ಇದರ ಪ್ರಯೋಜನ ಪಡೆಯಲಿದ್ದಾರೆ. ಮಹಿಳಾ ನೌಕರರ ತಂದೆ-ತಾಯಿಗಳಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಡಿ 450ಕ್ಕೂ ಹೆಚ್ಚು ವಯೋವೃದ್ಧರು ಉಚಿತವಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸರ್ಕಾರಿ ನೌಕರರು ಅಪಘಾತದಲ್ಲಿ ಮೃತಪಟ್ಟರೇ ಅಂತವರ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡುವ ಯೋಜನೆ ಜಾರಿಯಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



