ಹೌದು ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ(KASS)ಕುರಿತು ರಾಜ್ಯದ ಸರ್ಕಾರಿ ನೌಕರರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಷಡಾಕ್ಷರಿ ಅವರು ಇಂದು ಬೆಂಗಳೂರಿನಲ್ಲಿ ಸಭೆ ಮಾಡಿದರು.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಆರಂಭಿಸುವ ಸಂಬಂಧ ವಾಗಿ ನಡೆದ ಈ ಒಂದು ಸಭೆಯಲ್ಲಿ ಈ ಕೆಳಕಂಡ ವಿಷಯಗಳ ಬಗ್ಗೆ ಚರ್ಚಿಸಲಾಯಿತು
ಸಾಫ್ಟ್ ವೇರ್ ಅಭಿವೃದ್ಧಿಪಡಿಸುವ ಕಾರ್ಯವನ್ನು ಚುರುಕುಗೊಳಿಸಿ ಶೀಘ್ರ ಪೂರ್ಣಗೊಳಿಸುವುದು
ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ನೌಕರರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವುದು
ಪ್ರತಿಷ್ಠಿತ ಆಸ್ಪತ್ರೆಗಳೊಂದಿಗೆ MOU (ಒಡಂಬಡಿಕೆ) ಮಾಡುವ ಕಾರ್ಯ ಪೂರ್ಣಗೊಳಿಸುವುದು. ಈ ಒಂದು ಅಂಶಗಳನ್ನು ಸಭೆಯಲ್ಲಿ ಚರ್ಚೆಯನ್ನು ಮಾಡಲಾಯಿತು.ಸಭೆಯಲ್ಲಿ ರಾಜ್ಯಾಧ್ಯಕ್ಷರೊಂದಿಗೆ ಸಂಘದ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.