ಮಂಗಳೂರು –
ಮಹಾಮಾರಿ ಕೋವಿಡ್ ಗೆ ಲೇಡಿ PSI ರೊಬ್ಬರು ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ನಡೆದಿದೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿಭಾಯಿಸು ತ್ತಿದ್ದ ಶಾಮಿಲಿ(24) ಕೋವಿಡ್ ಗೆ ಬಲಿಯಾದವರಾ ಗಿದ್ದಾರೆ
ಈ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿಯ ನ್ನು ಹಂಚಿಕೊಂಡಿದ್ದಾರೆ.ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಲ್ಲ ರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂ ದಿಗೆ ಸಹಕರಿಸಿ,ಸುರಕ್ಷಿತವಾಗಿರಿ ಎಂದು ಈ ವೇಳೆ ಮನವಿ ಮಾಡಿದ್ದಾರೆ.
24 ವರ್ಷದ ಪ್ರೊಬೆಷನರಿ ಪಿಎಸ್ ಐ ಶಾಮಿಲಿ ಮೂಲತಃ ಕೋಲಾರದವರು. ಜನವರಿ 11 ರಂದು ಮಂಗಳೂರು ಎಸ್ ಪಿ ಕಚೇರಿಯಲ್ಲಿ ಸೇವೆ ಆರಂ ಭಿಸಿದ್ದರು.7 ತಿಂಗಳ ಗರ್ಭಿಣಿಯಾಗಿದ್ದ ಅವರು ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿ ದ್ದರು.
ಬಳಿಕ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಮೇ 2 ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು ಇಂದು ಚಿಕಿತ್ಸೆ ಫಲಿಸದೇ ನಿಧನರಾ ಗಿದ್ದಾರೆ.
ಗರ್ಭಿಣಿಯಾಗಿದ್ದ ಕಾರಣ ಅವರು ಕೋವಿಡ್ ಲಸಿಕೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದ್ದು ಮೃತರಾದ ಮಹಿಳಾ ಪೊಲೀಸ್ ಅಧಿಕಾರಿಗೆ ನಾಡಿನ ಮೂಲೆ ಮೂಲೆಗಳಿಂದ ಇಲಾಖೆಯ ಅಧಿಕಾರಿಗಳು ಸಿಬ್ಬಂ ದಿ ಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವ ನ್ನು ಸೂಚಿಸಿದ್ದಾರೆ.