ಧಾರವಾಡ –
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ 71 ರಲ್ಲಿ ಚುನಾವಣೆಯ ಅಖಾಡ ಕಾವೇರುತ್ತಿದೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಪರ ಒಲವು ಹೆಚ್ಚಾಗಿದ್ದು ಬದಲಾವಣೆ ಬಯಸಿರುವ ಮತದಾರರು ಈ ಬಾರಿ ಮತ್ತೆ ವಿನಯ ಕುಲಕರ್ಣಿ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ
ಇನ್ನೂ ಕ್ಷೇತ್ರದ ವ್ಯಾಪ್ತಿಯ ನರೇಂದ್ರ ಹಾಗು ಗರಗ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಹಾಗೂ ಬಹಿರಂಗ ಚುನಾವಣಾ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ನಿಕೇತ ಮೌರ್ಯರವರು ಭಾಗಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ವಿನಯ ಕುಲಕರ್ಣಿ ಪರವಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಧಾರವಾಡ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಈಗನಗೌಡರ ಹಾಗು ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ ಶಿವಳ್ಳಿ, ಗ್ರಾಮಸ್ಥರು, ಗುರು ಹಿರಿಯರು, ಪಕ್ಷದ ಕಾರ್ಯಕರ್ತರು ಭಾಗಿಯಾದರು
ಸುದ್ದಿ ಸಂತೆ ನ್ಯೂಸ್ ಧಾರವಾಡ…..