ಶಿವಮೊಗ್ಗ –
ಕರೋನಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಶಾಲಾ-ಕಾಲೇಜುಗಳು ತಡವಾಗಿ ಆರಂಭವಾಗಿವೆ. ಈ ಬಾರಿ ಕೊರೊನಾ ಕಾರಣದಿಂದ ತಡವಾಗಿ ಆರಂಭವಾಗಿದ್ದು, ಈ ಬಾರಿ ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದಿಲ್ಲ ಎಂದು ಹೇಳಲಾಗಿದೆ.

ಶಾಲೆ, ಕಾಲೇಜು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ತಿಂಗಳವರೆಗೆ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದ ದುರ್ಗಿಗುಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ವೀಕ್ಷಣೆಯ ನಂತರ ಅವರು ಮಾತನಾಡಿ, ಬೇಸಿಗೆ ರಜೆಯನ್ನು ಬಳಸಿಕೊಂಡು ಮೇ ವರೆಗೆ ಶಾಲೆಗಳನ್ನು ನಡೆಸುವ ಚಿಂತನೆ ಇದೆ. ಜೂನ್ ನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಸಾಕಷ್ಟು ರಜೆ ಕಳೆದಿದ್ದು, ಉಳಿದ ನಾಲ್ಕೂವರೆ ತಿಂಗಳು ಶಿಕ್ಷಕರ ಪಾಠದ ಕಡೆ ಗಮನಹರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.