ರಾಜಕಾರಣದಿಂದ ಹಿಂದೆ ಸರಿಯದೇ ಪುನಃ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡಿ BSY ಗೆ ಸಿದ್ದರಾಮಯ್ಯ ಕರೆ – ಬದಾಮಿ ಜನತೆಯ ಪ್ರೀತಿಗೆ ನಾನು ಸದಾ ಋಣಿ ಎಂದ ಸಿದ್ದರಾಮಯ್ಯ

Suddi Sante Desk
ರಾಜಕಾರಣದಿಂದ ಹಿಂದೆ ಸರಿಯದೇ ಪುನಃ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡಿ BSY ಗೆ ಸಿದ್ದರಾಮಯ್ಯ ಕರೆ – ಬದಾಮಿ ಜನತೆಯ ಪ್ರೀತಿಗೆ ನಾನು ಸದಾ ಋಣಿ ಎಂದ ಸಿದ್ದರಾಮಯ್ಯ

ಬೆಂಗಳೂರು

ರಾಜಕಾರಣದಿಂದ ಹಿಂದೆ ಸರಿಯದೇ ಪುನಃ ಇನ್ನೊಮ್ಮೆ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಒತ್ತಾಯ ಮಾಡಿದ್ದಾರೆ.ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಉಲ್ಲೇಖವನ್ನು ಮಾಡಿರುವ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವ ಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡು ವಂತೆ ಸಲಹೆ ನೀಡಿದ್ದಾರೆ

ಅವರ ಸಲಹೆಗೆ ನಾನು ಧನ್ಯವಾದಗಳನ್ನು ಸಲ್ಲಿ ಸುತ್ತೇನೆ.ನನ್ನ ಹಿತೈಷಿಯಂತಿರುವ ಯಡಿಯೂರ ಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ.ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ.ಸೋಲುವ ಭಯ ದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ.ಮತ್ತೆ ಬಾದಾಮಿ ಯಿಂದಲೇ ಸ್ಪರ್ಧಿಸಿ ಶಾಸಕನಾದರೆ ವಾರಕ್ಕೊ ಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿಕೊಟ್ಟು ಜನರ ಕಷ್ಟ ದಲ್ಲಿ ಭಾಗಿಯಾಗಬೇಕು

ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿ ಕೊಳ್ಳಬೇಕು ಆದರೆ ವಯಸ್ಸು 75 ದಾಟಿದೆ ದೂರದ ಪ್ರಯಾಣ ಕಷ್ಟವೆನಿಸಿ ಬೆಂಗಳೂರಿಗೆ ಸಮೀಪದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಉಲ್ಲೇಖವನ್ನು ಮಾಡಿದ್ದಾರೆ.ಕಳೆದ 5 ವರ್ಷದಿಂದ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ನನಗೆ ಮತ ನೀಡಿ ಗೆಲ್ಲಿಸಿದ ಬಾದಾಮಿ ಜನರ ನಂಬಿಕೆಗೆ ಈ 5 ವರ್ಷಗಳಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ.

ಬಾದಾಮಿಯ ಜನರ ಪ್ರೀತಿಗೆ ನಾನು ಸದಾ ಋಣಿ ಇನ್ನೂ ಇತ್ತ ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವ ಯಡಿಯೂರಪ್ಪನವರು ಮತ್ತೊಮ್ಮೆ ಶಾಸಕರಾಗಿ ಜನಸೇವೆ ಮಾಡಲು ದೈಹಿಕವಾಗಿ ಶಕ್ತರಿದ್ದಾರೆ ಹೀಗಿದ್ದಾಗ ಚುನಾವಣಾ ರಾಜಕಾರಣ ದಿಂದ ಹಿಂದೆ ಸರಿದರೆ ದಶಕಗಳಿಂದ ಗೆಲ್ಲಿಸುತ್ತಾ ಬಂದಿರುವ ಶಿಕಾರಿಪುರದ ಜನರಿಗೆ ದ್ರೋಹ ಬಗೆ ದಂತಾಗುವುದಿಲ್ಲವೇ ಎಂದು ಪ್ರಶ್ನೆಯನ್ನು ಮಾಡಿ ದರು.

ಯಡಿಯೂರಪ್ಪನವರು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ನನ್ನ ಸಲಹೆ ಯನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾ ರೆಂದು ಭಾವಿಸಿದ್ದೇನೆ ಎಂದು ಉಲ್ಲೇಖವನ್ನು ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.