ಬೆಂಗಳೂರು –
ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಬೆಂಗಳೂರಿನಲ್ಲಿ ಸ್ಥಳೀಯ ಮುಖಂಡರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆ ನಡೆಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಸಮಾಲೋಚನೆ ನಡೆಸಿ ಪಕ್ಷದ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ಮಾಡಿದರು. ಯಾವ ಅಭ್ಯರ್ಥಿಯನ್ನ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಮಾತುಕತೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಆರ್. ಹಲಗೂರ್ ಸೇರಿದಂತೆ ಮತ್ತಿತರರು ಮುಖಂಡರು ಈ ಒಂದು ಸಭೆಯಲ್ಲಿ ಭಾಗವಹಿಸಿದ್ದರು.