ಬೀದರ್ –
ಎಸ್ಐಆರ್ ಕರ್ತವ್ಯದಲ್ಲಿದ್ದ ಬಿಎಲ್ಒ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬೀದರ್ ನಲ್ಲಿ ನಡೆದಿದೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಲ್ಒ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಭಾಲ್ಕಿಯ ಸುನೀಲ್ (45) ಮೃತಪಟ್ಟವರಾಗಿದ್ದು ಬೀದರ್ ತಾಲ್ಲೂಕಿನ ಅಮಲಾಪುರ ಗ್ರಾಮದಲ್ಲಿ ಶಿಕ್ಷಕರಾಗಿದ್ದ ಅವರು ಗ್ರಾಮದ ಬೂತ್ 33ರಲ್ಲಿ ಎಸ್ಐಆರ್ ಕೆಲಸದಲ್ಲಿ ನಿರತರಿದ್ದಾಗ ಸುಸ್ತಾಗಿ ಕುಸಿದು ಬಿದ್ದಿದ್ದಾರೆ.ಬಳಿಕ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ನಗರದ ಬ್ರಿಮ್ಸ್ಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.
ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಟಂಟ್ ಅಳವಡಿಸಲಾಗಿತ್ತು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು ಅಂತ್ಯಕ್ರಿಯೆ ನಡೆಯಿತು ಇನ್ನೂ ಮೃತ ಶಿಕ್ಷಕರ ಸುದ್ದಿ ತಿಳಿದು ಶಿಕ್ಷಕ ಬಂಧು ಗಳು ಸಂತಾಪ ಸೂಚಿಸಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೀದರ್…..



