ಉತ್ತರ ಪ್ರದೇಶ –
ಬೆಳ್ಳ ಬೆಳಿಗ್ಗೆ ಉತ್ತರ ಪ್ರದೇಶದ ಕನೌಜ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಗ್ರಾ – ಲಕ್ನೋ ಹೆದ್ದಾರಿಯ ತಾಲಾ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.
ದಟ್ಟ ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಬದಿ ನಿಂತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದ್ದು, ಕಾರ್ ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರ ಕುರಿತು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಇನ್ನೂ ಅಪಘಾತಕ್ಕೀಡಾದ ವಾಹನದಲ್ಲಿದ್ದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಕನೌಜ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.