ಬೆಂಗಳೂರು –
ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ನಡೆದಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಇಂದು ಪ್ರಕಟ ವಾಗಿದ್ದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದು
8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದರು.8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.ಒಟ್ಟಾರೆ ಶೇ.85.63 ಮಕ್ಕಳು SSLC ಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.ಪ್ರತಿ ಬಾರಿ ಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು ಶೇ.90.29 ಉತ್ತೀರ್ಣರಾಗಿದ್ದಾರೆ.ಇನ್ನು ಶೇ.81.30 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಗ್ರೇಡ್ ವೈಸ್ ಫಲಿತಾಂಶ:
A+ (90-100%): 1,18,875
A (80-89%): 1,82,600
B+ (70-79%): 1,73,528
B (60-69%): 1,43,900
C+ (50-59%): 87,801
C (35-49%): 14,627
ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಯಾವುದೇ ಅಡೆತಡೆಯಿಲ್ಲದೇ ನಡೆದಿದ್ದು 2022 ರ ಕರ್ನಾಟಕ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಮಾರ್ಚ್ 28, 2022 ರಿಂದ ಏಪ್ರಿಲ್ 11 ,2022 ರವರೆಗೆ ರಾಜ್ಯದ 3440 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು. ಫಲಿತಾಂಶ karresults.nic.in ಈ ವೆಬ್‌ಸೈಟ್ ನಲ್ಲಿಯೂ ಲಭ್ಯವಿದ್ದು ವಿದ್ಯಾರ್ಥಿಗಳು ವೀಕ್ಷಿಸಬಹು ದಾಗಿದೆ
ಮರು ಮೌಲ್ಯಮಾಪನ – ಫಲಿತಾಂಶದ ಬಳಿಕ ಮರುಮೌಲ್ಯಮಾಪನ ಅಥವಾ ಅಂಕಗಳ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೂರು ದಿನಗಳಲ್ಲೇ ತಮ್ಮ ಉತ್ತರ ಪತ್ರಿಕೆಯ ಪ್ರತಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೆಬ್ ಸೈಟ್ ನಲ್ಲಿ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.ಈ ಮೂಲಕ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಉತ್ತರ ಪತ್ರಿಕೆ ಲಭ್ಯವಾಗು ವಂತೆ ಅನುಕೂಲ ಕಲ್ಪಿಸಲಾಗಿದೆ.ಈ ಮೊದಲು ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಮೌಲ್ಯಮಾಪನ ಅಥವಾ ಅಂಕಗಳ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಇಮೇಲ್ ವಿಳಾಸಕ್ಕೆ ಕಳುಹಿಸಲಾಗುತ್ತಿತ್ತು. ಆದರೆ ಇಮೇಲ್ ವಿಳಾಸ ನೀಡುವ ಸಂದರ್ಭದಲ್ಲಿ ಒಂದು ಅಕ್ಷರ ವ್ಯತ್ಯಾಸವಾದರೂ ಸಹ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ತಲುಪುತ್ತಿರಲಿಲ್ಲ.ಇದರಿಂದ ವಿಳಂಬವಾಗುತ್ತಿತ್ತು.
ಆದರೆ ಇದೀಗ ಮಂಡಳಿಯ ವೆಬ್ ಸೈಟ್ ನಲ್ಲಿ ಉತ್ತರ ಪತ್ರಿಕೆಯ ಪ್ರತಿಯನ್ನು ಅಪ್ ಲೋಡ್ ಮಾಡಲಿದ್ದು, ವಿದ್ಯಾರ್ಥಿಗಳು ನೀಡುವ ಮೊಬೈಲ್ ಸಂಖ್ಯೆಗೆ ಓಟಿಪಿ ಬಂದ ವೇಳೆ ಲಾಗಿನ್ ಕ್ರಿಯೇಟ್ ಮಾಡಬೇಕಾಗುತ್ತದೆ.ಆ ಬಳಿಕ ನೋಂದಣಿ ಸಂಖ್ಯೆ ಹಾಗೂ ಮೊಬೈಲ್ ಒಟಿಪಿ ಯನ್ನು ನಮೂದಿಸಿದರೆ ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ವಿದ್ಯಾರ್ಥಿಗಳು ನೋಡಬಹುದಾಗಿದೆ.